ನಾಳೆ ರಾಮಕುಂಜದಲ್ಲಿ ಕಡಬ ತಾ. 5ನೇಯ ಕನ್ನಡ ಸಾಹಿತ್ಯ ಸಮ್ಮೇಳನ

0

ರಾಮಕುಂಜ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಇದರ ಆಶ್ರಯದಲ್ಲಿ ಕಡಬ ತಾಲೂಕು 5ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಆ.29ರಂದು ಬೆಳಗ್ಗಿನಿಂದ ಸಂಜೆ ತನಕ ರಾಮಕುಂಜ ಶ್ರೀ ವಿಶ್ವೇಶತೀರ್ಥ ಸೌಧ ಸಭಾಂಗಣದಲ್ಲಿ ಸಮ್ಮೇಳನಾಧ್ಯಕ್ಷೆ ಶಕುಂತಳಾ ಟಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಸೇಸಪ್ಪ ರೈ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಕೇಶವ ಅಮೈ ಕಲಾಯಿಗುತ್ತು ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.


ಬೆಳಗ್ಗೆ 8.30ಕ್ಕೆ ಕಾಜರುಕ್ಕು ವೃತ್ತದಿಂದ ಸಮ್ಮೇಳನದ ವೇದಿಕೆಯವರೆಗೆ ಕನ್ನಡ ಭುವನೇಶ್ವರಿಯ ಮೆರವಣಿಗೆ ನಡೆಯಲಿದೆ. ೯.೧೫ರಿಂದ ಧ್ವಜಾರೋಹಣ ನಡೆಯಲಿದೆ. ೯.೩೦ರಿಂದ ಸಮ್ಮೇಳನದ ಉದ್ಘಾಟನೆ ನಡೆಯಲಿದ್ದು ಶಾಸಕಿ ಭಾಗೀರಥಿ ಮುರುಳ್ಯ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕ ಅಶೋಕ್‌ಕುಮಾರ್ ರೈ ಅನುಪಮ ಸಭಾಂಗಣ ಉದ್ಘಾಟಿಸಲಿದ್ದಾರೆ. ನಿವೃತ್ತ ಪ್ರಾಚಾರ್ಯ ಡಾ.ವರದರಾಜ ಚಂದ್ರಗಿರಿ ಸಮ್ಮೇಳನ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ಆಶಯ ನುಡಿ, ಸವಣೂರು ಶ್ರೀ ವಿದ್ಯಾರಶ್ಮಿ ವಿದ್ಯಾಸಂಸ್ಥಗಳ ಸಂಚಾಲಕ ಕೆ.ಸೀತಾರಾಮ ರೈ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಕಲಾ ಪ್ರದರ್ಶನ, ಕಡಬ ತಹಶೀಲ್ದಾರ್ ಗಣೇಶ್ ಸವಣೂರು ವಿಜ್ಞಾನ ಮತ್ತು ಗಣಿತ ಮಾದರಿಗಳ ಪ್ರದರ್ಶನ, ಕಡಬ ತಾ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ಕುಮಾರ್ ಭಂಡಾರಿ ಹೆಚ್. ಪುಸ್ತಕ ಪ್ರದರ್ಶನ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಸುರೇಶ್ ಪ್ರಾಚ್ಯವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಎನ್.ಕರುಣಾಕರ ಗೋಗಟೆ, ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ರಘು, ಕಸಾಪ ಕಡಬ ತಾಲೂಕು ನಿಕಟಪೂರ್ವಾಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಸಂಚಾಲಕ ಶಿವಪ್ರಸಾದ್ ಇಜ್ಜಾವು, ರಾಮಕುಂಜ ಗ್ರಾ.ಪಂ.ಪಿಡಿಒ ಮೋಹನ್, ರಾಮಕುಂಜ ಕ್ಲಸ್ಟರ್ ಸಿಆರ್‌ಪಿ ಮಹೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಮಧ್ಯಾಹ್ನ ೧೨.೧೦ರಿಂದ ಕನ್ನಡ ಬೆಳವಣಿಗೆಯಲ್ಲಿ ತುಳು ಭಾಷೆಯ ಕೊಡುಗೆ ವಿಚಾರಗೋಷ್ಠಿ ಹಾಗೂ ಕೃತಿ ಬಿಡುಗಡೆ ನಡೆಯಲಿದ್ದು ಇತಿಹಾಸಕಾರರು, ಸಂಶೋಧಕರೂ ಆದ ಡಾ.ತುಕಾರಾಮ ಪೂಜಾರಿ ಬಂಟ್ವಾಳ ವಿಚಾರ ಮಂಡನೆ ಮಾಡಲಿದ್ದಾರೆ. ಮಧ್ಯಾಹ್ನ ೧ರಿಂದ ಕವಿಗೋಷ್ಠಿ ನಡೆಯಲಿದ್ದು ಸಾಹಿತಿ, ಅಂಕಣಕಾರರೂ ಆದ ಕವಿತಾ ಅಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ ೧.೫೦ರಿಂದ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದೆ. ೨.೪೦ರಿಂದ ಸಾಧಕರಿಗೆ ಸನ್ಮಾನ ನಡೆಯಲಿದ್ದು ಶ್ರೀಧರ ಗೋರೆ ನೆಲ್ಯಾಡಿ (ಜ್ಯೋತಿಷ್ಯ), ರವಿ ರಾಮಕುಂಜ (ರಂಗಭೂಮಿ), ಜಯಕುಮಾರಿ ಎಂ.ಕುಂತೂರುಪದವು (ಶೈಕ್ಷಣಿಕ), ಗಂಗಾಧರ ಕಳಿಗೆ ಸುಬ್ರಹ್ಮಣ್ಯ (ದೈವಾರಾಧನೆ), ಅರುಣ್‌ಕುಮಾರ್ ಕಂಗುಳೆ ಪಿಜಕ್ಕಳ (ಸಾಂಪ್ರದಾಯಿಕ ಕೃಷಿ), ಮಂಜುನಾಥ ದೇವರಗದ್ದೆ (ಕಲೆ ಮತ್ತು ವಾಸ್ತುಶಿಲ್ಪ), ನಾಗರಾಜ್ ಎನ್.ಕೆ.(ಪತ್ರಿಕಾ ಕ್ಷೇತ್ರ), ದೀಕ್ಷಿತ್ ಇಡಾಳ (ಕಲೆ ಮತ್ತು ಸಾಂಸ್ಕೃತಿಕ) ಸನ್ಮಾನ ಸ್ವೀಕರಿಸಲಿದ್ದಾರೆ. ರಾಜ್ಯಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಗುರು ಸತೀಶ್ ಭಟ್ ಬಿಳಿನೆಲೆ ಅವರಿಗೆ ಅಭಿನಂದನೆ ನಡೆಯಲಿದೆ.


ಸಮಾರೋಪ:
ಸಂಜೆ ೩.೪೦ರಿಂದ ಸಮಾರೋಪ ನಡೆಯಲಿದ್ದು ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಧನಂಜಯ ಕುಂಬ್ಳೆ ಸಮಾರೋಪ ಭಾಷಣ ಮಾಡಲಿದ್ದಾರೆ. ದ.ಕ.ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.



ಸಾಂಸ್ಕೃತಿಕ ಕಾರ್ಯಕ್ರಮ;
ಕಾರ್ಯಕ್ರಮದ ಮಧ್ಯೆ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ, ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು, ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿ.ಪ್ರಾ.ಶಾಲೆ, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ ಹಾಗೂ ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here