ಆ.30: ಕೆಯ್ಯೂರಿನಲ್ಲಿ ಕೆಯ್ಯೂರು,ದೇರ್ಲ,ದೇವಿನಗರ,ಬೊಳಿಕ್ಕಲಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ ಸಮಾರಂಭ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ. ಟ್ರಸ್ಟ್ ಪುತ್ತೂರು,ಕೆಯ್ಯೂರು ವಲಯ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ, ರಾಜರ್ಷಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಕೆಯ್ಯೂರು, ದೇರ್ಲ, ದೇವಿನಗರ, ಬೊಳಿಕ್ಕಲ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಆ.30ರಂದು ಕೆಯ್ಯೂರು ಜಯ ಕರ್ನಾಟಕ ಸಭಾ ಭವನದಲ್ಲಿ ಜರುಗಲಿದೆ.

ಪೂರ್ವಾಹ್ನ 8:30ಕ್ಕೆ ಶ್ರೀ ದುರ್ಗಾ ಕುಣಿತ ಭಜನಾ ತಂಡ ಕಣಿಯಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಪೂರ್ವಾಹ್ನ 9:00 ಗಂಟೆಗೆ ಒಕ್ಕೂಟಗಳ ಪದಗ್ರಹಣ ಸಮಾರಂಭ ನೆರವೇರಲಿದೆ. ಅಪರಾಹ್ನ 2:00 ಗಂಟೆಯಿಂದ ಒಕ್ಕೂಟಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬರಲಿವೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಉದಯಕುಮಾರ್ ಜಿ.ಕೆ. ವಹಿಸಲಿದ್ದು, ಉಡುಪಿ ಪ್ರಾಂತೀಯ ವಿಭಾಗದ ಪ್ರಾಂತೀಯ ನಿರ್ದೇಶಕ ಆನಂದ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಜನಜಾಗೃತಿ ವೇದಿಕೆ ಪುತ್ತೂರು ತಾಲೂಕಿನ ಮಾಜಿ ಅಧ್ಯಕ್ಷ ಮಹಾಬಲ ರೈ ಒಳತಡ್ಕ ಹಾಗೂ ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ. ಜಯರಾಮ ರೈ ಅವರು ದಾಖಲಾತಿ ಹಸ್ತಾಂತರ ಮಾಡಲಿದ್ದಾರೆ.

ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ,ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ನಳೀಲು ಸಂತೋಷ್ ಕುಮಾರ್ ರೈ, ಜನಜಾಗೃತಿ ವೇದಿಕೆ ಕೆಯ್ಯೂರು ವಲಯದ ಅಧ್ಯಕ್ಷ ಅಬ್ದುಲ್ ಖಾದರ್ ಮೇರ್ಲ, ಕೆಯ್ಯೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಶರತ್ ಕುಮಾರ್ ಮಾಡಾವು ಹಾಗೂ ಜನಜಾಗೃತಿ ಸದಸ್ಯ ಆನಂದ ರೈ ದೇವಿನಗರ ಭಾಗವಹಿಸಿ ಅನುದಾನ ಮತ್ತು ಮಂಜೂರಾತಿ ಪತ್ರ ವಿತರಿಸಲಿದ್ದಾರೆ. ಈ ಸಮಾರಂಭಕ್ಕೆ ಗ್ರಾಮಸ್ಥರು, ಗ್ರಾಮಾಭಿವೃದ್ಧಿ ಯೋಜನೆಯ ಸರ್ವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಒಕ್ಕೂಟಗಳ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
…..

LEAVE A REPLY

Please enter your comment!
Please enter your name here