






ಕಡಬ: ಠಾಣಾ ವ್ಯಾಪ್ತಿಯ ಕಡಬ ಹಳೆನೇರೆಂಕಿ ಗ್ರಾಮದ ಕುನ್ನಿಕು ಎಂಬಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.


ಆ.28ರಂದು ಸಂಜೆ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಆಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪಿಎಸ್ಐ ಜಂಬುರಾಜ್ ಮಹಾಜನ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಕಡಬ ಕುದ್ಮಾರು ನಿವಾಸಿ ಗುರುವ (44) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಇಸ್ಪೀಟ್ ಎಲೆ, ನಗದು ರೂ. 1,700, ಆರೋಪಿಗಳು ಬಿಟ್ಟು ಹೋದ 2 ದ್ವಿಚಕ್ರ ವಾಹನ ಹಾಗೂ 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ.



ಈ ಬಗ್ಗೆ ಕಡಬ ಠಾಣೆಯಲ್ಲಿ ಅ.ಕ್ರ: 102/2026, ಕಲಂ 78, 80 KP Act ಮತ್ತು 112 BNS-2023 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.










