“ಪುತ್ತೂರು ಚಲೋ” ಗೆ ಬಿಜೆಪಿ ಸಿದ್ಧತೆ

0

ಪುತ್ತೂರು: ಆ.31ರಂದು ದರ್ಬೆಯಿಂದ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ನಡೆಯುವ ಪುತ್ತೂರು ಚಲೋ” ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ಸಜ್ಜಾಗಿದೆ.
ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎರಡು ಮಂಡಲಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಪ್ರಮುಖರು, ಮಂಡಲದ ಪ್ರಮುಖರು ಹಾಗೂ ಪುತ್ತೂರು ಬಿಜೆಪಿಯ ವಿವಿಧ ಹಂತದ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು. ಅನ್ಯಾಯ, ಅಕ್ರಮ, ದೌರ್ಜನ್ಯ ಮತ್ತು ಅಧಿಕಾರದ ದುರುಪಯೋಗದ ವಿರುದ್ಧ ಪುತ್ತೂರಿನ ಜನರ ಧ್ವನಿಯಾಗಿ ಬಿಜೆಪಿ ಹೋರಾಟ ನಡೆಸಲಿದೆ. ಜನರ ಹಕ್ಕು, ಶಾಂತಿ ಮತ್ತು ನ್ಯಾಯಕ್ಕಾಗಿ ಯಾವುದೇ ಒತ್ತಡಕ್ಕೂ ಮಣಿಯದೆ ಹೋರಾಟ ಮುಂದುವರಿಸುವ ಸಂಕಲ್ಪವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.


ದರ್ಬೆಯಿಂದ ಮಹಾಲಿಂಗೇಶ್ವರ ದೇವಸ್ಥಾನದ ತನಕ ಪುತ್ತೂರು ಚಲೋ:
ಆ. 31ರಂದು ಬೆಳಿಗ್ಗೆ ಗಂಟೆ 10.30ಕ್ಕೆ, ದರ್ಬೆ ವೃತ್ತದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ “ಪುತ್ತೂರು ಚಲೋ” ನಡೆಯಲಿದೆ. ಪುತ್ತೂರಿನ ಸಮಸ್ತ ನಾಗರಿಕರು ಹಾಗೂ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ “ಪುತ್ತೂರು ಚಲೋ”ವನ್ನು ಯಶಸ್ವಿಗೊಳಿಸಬೇಕಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here