







ಪುತ್ತೂರು: ಪರ್ಲಡ್ಕ ಶಿವಪೇಟೆ ವಿವೇಕಾನಂದ ಶಿಶುಮಂದಿರದಲ್ಲಿ ಆ.28ರಂದು ಸಹೋದರತೆಯ ಸಂಕೇತವಾದ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು.


ಶಿಶುಮಂದಿರದಲ್ಲಿ ಮಕ್ಕಳಿಂದ ಮಕ್ಕಳಿಗೆ ರಕ್ಷೆಯನ್ನು ಕಟ್ಟುವ ಮೂಲಕ ಹಾಗೆಯೇ ಅಂಚೆ ಕಛೇರಿ, ಪೊಲೀಸ್ ಠಾಣೆ, ಎಸ್‌ಸಿಡಿಸಿಸಿ ಬ್ಯಾಂಕ್, ಪುರಸಭೆ, ಭಾರತೀಯ ಜನತಾ ಪಕ್ಷದ ಕಛೇರಿ, ಎಲ್‌ಐಸಿ ಆಫೀಸ್ ಹಾಗೂ ಇನ್ನಿತರ ಕಛೇರಿಗಳಿಗೆ ಮಾತಾಜಿಯವರೊಂದಿಗೆ ತೆರಳಿ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ರಕ್ಷೆಯನ್ನು ಕಟ್ಟುವ ಮೂಲಕ ರಕ್ಷಾಬಂಧನವನ್ನು ಆಚರಿಸಲಾಯಿತು.













