ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆ.29 ರಂದು ರಾಷ್ಟ್ರೀಯ ಕ್ರೀಡಾದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಪುತ್ತೂರು ನಿವೃತ್ತ ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿ ಮಾಧವ. ಬಿ. ಕೆ ಅವರು ಮಾತನಾಡುತ್ತಾ ,”ಭಾರತೀಯ ಹಾಕಿ ಪಟು ಮೇಜರ್ ಧ್ಯಾನ್ ಚಂದ್ ಅವರ ಆಟದ ಕೌಶಲ್ಯತೆ ಮತ್ತು ಸಾಧನೆಯನ್ನು ವಿವರಿಸಿದರು ಹಾಗೆಯೇ ಕ್ರೀಡಾ ದಿನಾಚರಣೆಯಂದು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ನಾವು ನೆನಪಿಸಿಕೊಳ್ಳಬೇಕು ಮತ್ತು ಅವರ ಸಾಧನೆಯೇ ನಮಗೆ ಸ್ಪೂರ್ತಿಯಾಗಬೇಕು” ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಸಿವಿಲ್ ವಿಭಾಗದ ಮುಖ್ಯಸ್ಥ ರವಿರಾಮ ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅರ್ಚನಾ ,ನಿಶಿತಾ, ಪರ್ಣವಿ ಪ್ರಾರ್ಥನೆಯನ್ನು ನೆರವೇರಿಸಿದರು. ಚೈತ್ರ ಬಿ ನಿರೂಪಿಸಿದರು. ಜಯಲಕ್ಷ್ಮಿ ಪರಿಚಯಿಸಿ,ದೀಪಾ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here