






ನಿಡ್ಪಳ್ಳಿ; ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಸಮಿತಿ, ಶ್ರೀ ವಿಷ್ಣುಮೂರ್ತಿ ದೇವಾಲಯ ಗೋಪಾಲ ಕ್ಷೇತ್ರ ಇರ್ದೆ ಇವುಗಳ ಆಶ್ರಯದಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಪ್ಪಳಿಗೆ, ದೂಮಡ್ಕ, ಪೇರಲ್ತಡ್ಕ, ಗುಮ್ಮಟೆಗದ್ದೆ, ಅಜಲಡ್ಕ, ಅಜ್ಜಿಕಲ್ಲು ಇವುಗಳ ಸಹಕಾರದೊಂದಿಗೆ 18 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ, ಧಾರ್ಮಿಕ ಸಭೆ ಹಾಗೂ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಆ.28 ರಂದು ಇರ್ದೆ ದೇವಾಲಯದಲ್ಲಿ ನಡೆಯಿತು.


ಧಾರ್ಮಿಕ ಉಪನ್ಯಾಸ ನೀಡಿದ ವಿದುಷಿ ಭಾಗ್ಯಶ್ರೀ ರೈ ವರಮಹಾಲಕ್ಷ್ಮೀ ವ್ರತ ಪೂಜೆ ಯ ಮಹತ್ವ ಮತ್ತು ಚಿಕ್ಕಂದಿನಲ್ಲಿಯೇ ಹೆಣ್ಣು ಮಕ್ಕಳಿಗೆ ಸಾಂಪ್ರದಾಯಕವಾಗಿ ಇರುವುದನ್ನು ಕಲಿಸಿ ಕೊಡಬೇಕು ಮತ್ತು ಹೆಣ್ಣುಮಕ್ಕಳು ಧರಿಸುವ ಹೂ ಕುಂಕುಮ ಬಲೆಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು.



ಮುಖ್ಯ ಅತಿಥಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ದ.ಕ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಮಾತನಾಡಿ ಪದಾಧಿಕಾರಿಗಳ ಜವಾಬ್ದಾರಿ, ಮಾಸಾಶನ ಕಾರ್ಯಕ್ರಮ ಮತ್ತು ಪ್ರಗತಿ ನಿಧಿ ಕಾರ್ಯಕ್ರಮ ಸೇರಿದಂತೆ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ವಿಸ್ತಾರವಾಗಿ ತಿಳಿಸಿ ಇನ್ನೂ ಮುಂದೆಯೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಹೇಳುತ್ತಾ ಶುಭ ಹಾರೈಸಿದರು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ ಯೋಜನೆಯ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದಿನ ಕಾರ್ಯಕ್ರಮ ಎಲ್ಲಾ ಸದಸ್ಯರ ಸಹಕಾರದಿಂದ ಉತ್ತಮವಾಗಿ ಮೂಡಿ ಬಂದಿದೆ.ದೇವಸ್ಥಾನದ ಬ್ರಹ್ಮ ಕಲಶ ಸಂದರ್ಭದಲ್ಲೂ ಇನ್ನೂ ಹೆಚ್ಚಿನ ಸಹಕಾರ ಬೇಕೆಂದು ಶುಭ ಹಾರೈಸಿದರು . ಬ್ರೈಟ್ ವೇ ಇಂಡಿಯಾ ಕನ್ಸಲ್ಟೆನ್ಸಿ ಪ್ರೈ . ಲಿ., ಮಂಗಳೂರು ಇದರ ನಿರ್ದೇಶಕ ಮನಮೋಹನ ರೈ ಚೆಲ್ಯಡ್ಕ ,ಯೋಜನಾಧಿಕಾರಿ ಶಶಿಧರ್.ಎಂ, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟಗಳ ಬೆಟ್ಟಂಪಾಡಿ ವಲಯದ ಅಧ್ಯಕ್ಷ ಬಾಲಕೃಷ್ಣ. ಎನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ;
ಬೆಟ್ಟಂಪಾಡಿ ವಲಯದ ಉಪ್ಪಳಿಗೆ , ಅಜಲಡ್ಕ,ಪೇರಲ್ತಡ್ಕ, ದೂಮಡ್ಕ ಅಜ್ಜಿಕಲ್ಲು ಒಕ್ಕೂಟಗಳ ನಿಕಟಪೂರ್ವ ಪದಾಧಿಕಾರಿಗಳು ನೂತನ ಪದಾಧಿಕಾರಿಗಳಿಗೆ ದಾಖಲಾತಿ ಪುಸ್ತಕ ಹಾಗೂ ವೀಳ್ಯ ಹಸ್ತಾಂತರಿಸುವ ಮೂಲಕ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಸರೋಜ ದೇವಸ್ಯ ಪ್ರಾರ್ಥಿಸಿ ಸೇವಾ ಪ್ರತಿನಿಧಿ ತ್ರಿವೇಣಿ ಸ್ವಾಗತಿಸಿದರು.ಸೇವಾ ಪ್ರತಿನಿಧಿ ಲೀಲಾವತಿ ವಂದಿಸಿದರು ವಲಯ ಮೇಲ್ವಿಚಾರಕ ಆದರ್ಶ್ ಕಾರ್ಯಕ್ರಮ ನಿರೂಪಿಸಿದರು.ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.ಒಕ್ಕೂಟಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಸೇವಾ ಪ್ರತಿನಿಧಿಗಳು ಸಹಕರಿಸಿದರು.ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.










