ಪೊಲೀಸರಿಂದ ಅನುಮತಿ ದೊರೆಯದ ಹಿನ್ನೆಲೆ: ಮುಸ್ಲಿಂ ಯುವಜನ ಪರಿಷತ್‌ನ ಶಾಂತಿ ಸೌಹಾರ್ದ ಚಲೋ ಮುಂದೂಡಿಕೆ

0

ಪುತ್ತೂರು: ದಕ್ಷಿಣ ಕನ್ನಡ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ಇದರ ವತಿಯಿಂದ ಆ.31ರಂದು ನಡೆಯಬೇಕಿದ್ದ ಪುತ್ತೂರು ಶಾಂತಿ ಸೌಹಾರ್ದ ಚಲೋ ಕಾರ್ಯಕ್ರಮವನ್ನು ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸೂಚಿಸಿದ ಹಿನ್ನೆಲೆಯಲ್ಲಿ ಮುಂದೂಡಿರುತ್ತಾರೆ.

ಪುತ್ತೂರಿನ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಉಳಿಸುವ ಉದ್ದೇಶದಿಂದ ಪುತ್ತೂರು ಶಾಂತಿ ಸೌಹಾರ್ದ ಚಲೋ ಕಾರ್ಯಕ್ರಮವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ, ನಮ್ಮ ನಾಯಕರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿವಿಧ ಹಂತಗಳಲ್ಲಿ ಚರ್ಚೆ ನಡೆಸಿದ ಬಳಿಕ, ಅದೇ ದಿನ ಇತರ ಕಾರ್ಯಕ್ರಮಗಳು ಇರುವುದರಿಂದ ಹಾಗೂ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ ಆ.31ರಂದು ನಡೆಯಬೇಕಿದ್ದ ಪುತ್ತೂರು ಶಾಂತಿ ಚಲೋ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆಯ ಅನುಮತಿ ಪಡೆದು, ಸೂಕ್ತ ದಿನಾಂಕವನ್ನು ನಿಗದಿಪಡಿಸಿ ಕಾನೂನುಬದ್ಧವಾಗಿ ಹಾಗೂ ಶಾಂತಿಯುತವಾಗಿ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಮುಸ್ಲಿಂ ಯುವಜನ ಪರಿಷತ್‌ನ ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here