






ಪುತ್ತೂರು: ಜೇಸಿಐ ಆಲಂಕಾರು ಘಟಕದ ವತಿಯಿಂದ ಆಗಸ್ಟ್ ತಿಂಗಳ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮ ಆಲಂಕಾರಿನ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಆಲಂಕಾರು ಘಟಕದ ಅಧ್ಯಕ್ಷ ಜೇಸಿ ಮಹೇಶ್ ಪಾಟಾಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸಿಐ ಭಾರತದ ವಲಯ 15ರ ವಲಯಾಧ್ಯಕ್ಷ ಜೇಸಿ ಸಂತೋಷ್ ಶೆಟ್ಟಿ, ವಲಯ ಉಪಾಧ್ಯಕ್ಷ ಜೇಸಿ ಕಾಶೀನಾಥ್ ಗೋಗಟೆ, ವಲಯಾಧ್ಯಕ್ಷರ ಆಪ್ತ ಕಾರ್ಯದರ್ಶಿ ಜೇಸಿ ಲೂಯಿಸ್ ಮಸ್ಕರೇನಸ್, ವಲಯಾಧಿಕಾರಿ ವಿನೀತ್ ಶಗ್ರಿತ್ತಾಯ, ನಿಕಟಪೂರ್ವಾಧ್ಯಕ್ಷ ಜೇಸಿ ಗುರುರಾಜ್ ರೈ ಭಾಗವಹಿಸಿದ್ದರು.



ಕಾರ್ಯಕ್ರಮದಲ್ಲಿ ಶಿಕ್ಷಕರಾಗಿ ಶೈಕ್ಷಣಿಕ ಬೋಧನೆಯ ಜೊತೆಗೆ, ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ತರಬೇತಿ ಹಾಗೂ ಪ್ರೋತ್ಸಾಹ ನೀಡಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತೆ ರೂಪುಗೊಳಿಸಿದ ತರಬೇತುದಾರ, ಸತತ ಮಾರ್ಗದರ್ಶನದಿಂದ ತರಬೇತಿ ನೀಡಿ ಗ್ರಾಮೀಣ ಭಾಗದ ನಾಲ್ಕು ವಿದ್ಯಾರ್ಥಿಗಳು ‘ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ’ ನಡೆಸಿದ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುವಂತೆ ಮಾಡಿರುವ ಕ್ರೀಡಾ ತರಬೇತುದಾರ ಚಂದ್ರಹಾಸ ಕೆ.ಸಿ ಇವರ ನಿಸ್ವಾರ್ಥ ಸೇವೆ,ಅಪ್ರತಿಮ ಕ್ರೀಡಾ ಪ್ರೇಮವನ್ನು ಗುರುತಿಸಿ ಜೇಸಿಐ ಆಲಂಕಾರು ಘಟಕದಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು.
ಘಟಕದ ಮಹಿಳಾ ಜೇಸಿ ಸಂಯೋಜಕಿ ಕೃತಿಕಾ ಟಿ.ರೈ, ಕಾರ್ಯಕ್ರಮ ನಿರ್ದೇಶಕ ಲಕ್ಷ್ಮೀನಾರಾಯಣ ಅಲೆಪ್ಪಾಡಿ, ಜೆಜೇಸಿ ಅಧ್ಯಕ್ಷೆ ಕೀರ್ತಿ ಶೆಟ್ಟಿ, ಜೇಸಿಐ ಆಲಂಕಾರು ಘಟಕದ ಪೂರ್ವಾಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.










