ಸವಣೂರು ಗ್ರಾ.ಪಂ.ನಲ್ಲಿ ಲೋಕಾಯುಕ್ತ ಪೊಲೀಸರಿಂದ ಕಡತ ಪರಿಶೀಲನೆ

0

ಪುತ್ತೂರು : ಕಡಬ ತಾಲೂಕಿನ ಸವಣೂರು ಗ್ರಾಮ ಪಂಚಾಯತ್‌ ನಲ್ಲಿ ಲೋಕಾಯುಕ್ತ ಪೊಲೀಸರು ಕಡತ ಪರಿಶೀಲನೆ ನಡೆಸಿದ್ದಾರೆ.

ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುದಾನ ಬಳಕೆ, ನರೇಗಾ ಕಾಮಗಾರಿಗಳ ಬಿಲ್ ಪಾವತಿ, ಸಾರ್ವಜನಿಕ ಅರ್ಜಿಗಳ ವಿಲೇವಾರಿ, ಕಟ್ಟಡ ನಿರ್ಮಾಣ ಪರವಾನಗಿ, ಖಾತಾ ಬದಲಾವಣೆ ಹಾಗೂ ಕಚೇರಿ ಹಾಜರಾತಿ ಪುಸ್ತಕಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಹಲಾಮೂರ್ತಿ ರಾವ್ ಮತ್ತು ಸಿಬ್ಬಂದಿಗಳಾದ ನಾಗರಾಜ್, ಪ್ರಸನ್ನ, ಸುದೀಪ್, ಜಲಾಲ್ ನೇತೃತ್ವದ ತಂಡ ಗ್ರಾಮ ಪಂಚಾಯಿತಿಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಸಾರ್ವಜನಿಕರಿಂದ ದೂರುಗಳು ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here