







ಪುತ್ತೂರು: ಪುತ್ತೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾರ್ಥಿಗಳು ರಕ್ಷೆಯನ್ನು ಒಬ್ಬರಿಗೊಬ್ಬರು ಕಟ್ಟಿಕೊಳ್ಳುವ ಮೂಲಕ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಇಂಜಿನಿಯರ್ ಹಾಗೂ ಸಮಾಜ ಸೇವಕ ಪ್ರಸನ್ನ ದರ್ಬೆ ಅವರು ಮಾತನಾಡಿ, ರಕ್ಷಾಬಂಧನವೂ ಸಹೋದರತ್ವದ ಸಂಕೇತ ಎನ್ನುತ್ತಾ ಆ ದಿನದ ಮಹತ್ವವನ್ನು ಮತ್ತು ಪುರಾಣದ ಕಥೆಗಳನ್ನು ಹೇಳುವುದರ ಮೂಲಕ ಮಕ್ಕಳಿಗೆ ರಕ್ಷಾಬಂಧನದ ಅರಿವು ಮೂಡಿಸಿದರು.



ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ರಕ್ಷಾಬಂಧನಕ್ಕಿರುವ ಪೌರಾಣಿಕ ಹಾಗೂ ಐತಿಹಾಸಿಕ ಕಾರಣಗಳನ್ನು ತಿಳಿಸುತ್ತಾ ನಾವೆಲ್ಲರೂ ಸಹೋದರ-ಸಹೋದರಿಯಂತೆ ಬದುಕಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಗೌರವ ಉಪಸ್ಥಿತಿ ಸ್ಥಾನದಲ್ಲಿದ್ದ ಶಾಲಾ ಆಡಳಿತ ಮಂಡಳಿಯ ನಿರ್ದೇಶಕಿ ಗೌರಿ ಬನ್ನೂರು ಅವರು ರಕ್ಷಾಬಂಧನದ ಸಂದೇಶವನ್ನು ನೀಡಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶೀನಪ್ಪ ಕುಲಾಲ್ ಸಂದರ್ಭೋಚಿತವಾಗಿ ಮಾತನಾಡಿದರು.
ವೇದಿಕೆಯಲ್ಲಿ ಶಾಲಾ ಸಂಚಾಲಕ ಎ ವಿ ನಾರಾಯಣ , ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಮಲಮೇಳು, ಮುಖ್ಯೋಪಾಧ್ಯಾಯ ಅಮರನಾಥ ಪಟ್ಟೆ ವಿದ್ಯಾರ್ಥಿ ನಾಯಕ ತನ್ವಿತ್ ಬಿ.ಜಿ ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿಯ ನಿರ್ದೇಶಕರು, ಬೋಧಕ-ಬೋಧಕೇತರ ವೃಂದ , ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಪೋಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿಯರಾದ ಶ್ರೀವಿಕಾ, ಜ್ಞಾನ, ಅನಿಕಾ ಪ್ರಾರ್ಥಿಸಿದರು. ಶಿಕ್ಷಕಿಯರಾದ ನಿಶ್ಮಿತಾ ಅವರು ಸ್ವಾಗತಿಸಿ, ಶ್ರೀಪ್ರಿಯಾ ಅವರು ಅತಿಥಿಗಳನ್ನು ಪರಿಚಯಿಸಿದರು. ರಾಧಾ ವಂದಿಸಿದರು. ಕುಮಾರಿ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.










