ಸೆ 4:ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

0

ಕಾವು :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ಸೆ 4 ರಂದು ನಡೆಯಲಿದೆ. ಕ್ರೀಡಾಕೂಟವನ್ನು ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ದೀಪ ಪ್ರಜ್ವಲಿಸಿ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಅಂಗನವಾಡಿ ಮಕ್ಕಳಿಗೆ, ಮಕ್ಕಳಿಗೆ, ಮಹಿಳೆಯರಿಗೆ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.


ಮುದ್ದು ರಾಧೆ -ಮುದ್ದು ಕೃಷ್ಣ ವೇಷ ಸ್ಪರ್ಧೆ
ಗೆಳೆಯರ ಬಳಗ ಕಾವು ಇವರ ಪ್ರಾಯೋಜಕತ್ವದಲ್ಲಿ ಬೆಳಿಗ್ಗೆ 11.30 ಕ್ಕೆ ಮುದ್ದು ಕೃಷ್ಣ -ಮುದ್ದು ರಾಧೆ ವೇಷ ಸ್ಪರ್ಧೆ ಇದೇ ಸಂದರ್ಭದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾವು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ನವೀನ್ ನನ್ಯ ಪಟ್ಟಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here