






ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ವಿಶೇಷ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಯಿತು. ಮಂಗಳೂರಿನಲ್ಲಿ ನಡೆದ ಕೇಂದ್ರ ಸಹಕಾರಿ ಬ್ಯಾಂಕ್ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಚೆಲ್ಯಡ್ಕ ಅವರನ್ನು ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ರವರು ಸನ್ಮಾನಿಸಿ ಗೌರವಿಸಿದರು. ಎಸ್ಸಿಡಿಸಿಸಿ ಬ್ಯಾಂಕ್ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ, ಮನ್ಮಥ, ಸಹಕಾರಿ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್, ಮುಂಡೂರು ಪ್ರಾ.ಕೃ.ಪ.ಸಹಕಾರಿ ಸಂಘದ ನಿರ್ದೇಶಕರಾದ ವಸಂತ ಬಿ.ಎನ್, ಪದ್ಮಯ್ಯ ಪಿ, ಸಿಬ್ಬಂದಿಗಳಾದ ಗಣೇಶ್ ಪಜಿಮಣ್ಣು, ರಿತೇಶ್ ರೈ ಉಪಸ್ಥಿತರಿದ್ದರು.


ಸಂಘದ ಸಾಧನೆ:
ಮುಂಡೂರು ಪ್ರಾ.ಕೃ.ಪ.ಸಹಕಾರಿ ಸಂಘವು ಮುಂಡೂರು, ಸರ್ವೆ, ಕೆಮ್ಮಿಂಜೆ ಕಾರ್ಯವ್ಯಾಪ್ತಿಯನ್ನು ಹೊಂದಿದ್ದು ವ್ಯವಹಾರದಲ್ಲಿ ವಿಶೇಷ ಸಾಧನೆಯನ್ನು ಮಾಡುತ್ತಾ ಬಂದಿದೆ. ಸಂಘವು ಕಳೆದ 14 ವರ್ಷಗಳಿಂದ ಸತತವಾಗಿ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿದೆ. ಸಾಲ ನೀಡುವಿಕೆ, ವಸೂಲಾತಿ, ಬೆಳೆವಿಮೆ ಮತ್ತು ಇನ್ನಿತರ ವಿಚಾರಗಳಲ್ಲಿ ಉತ್ಕೃಷ್ಠ ಸೇವೆಯನ್ನು ನೀಡುತ್ತಿರುವ ಸಂಘವು ಕೃಷಿಕರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಅಡಿಕೆ ಕೌಶಲ್ಯ ಪಡೆ ತರಬೇತಿ, ಅಡಿಕೆ ಕೃಷಿ ಮಾಹಿತಿ, ರೈತರ ಬೆಳೆ ಸಮೀಕ್ಷೆ, ಪ್ರಾತ್ಯಕ್ಷಿಕೆ, ಕಾರ್ಯಾಗಾರ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ರೈತರ ಹಿತ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಸಂಘದ ಅಧ್ಯಕ್ಷರ, ಉಪಾಧ್ಯಕ್ಷರ, ನಿರ್ದೇಶಕರ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ, ಸಿಬ್ಬಂದಿಗಳ ಹಾಗೂ ಸದಸ್ಯರ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಸಂಘವು 2025-26ನೇ ಸಾಲಿನಲ್ಲಿ 334.51 ಕೋಟಿ ರೂ ವ್ಯವಹಾರ ಮಾಡಿ 1.53 ಕೋಟಿ ರೂ ನಿವ್ವಲ ಲಾಭ ಗಳಿಸಿದೆ. ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಸಂಘಕ್ಕೆ ಸೇರಿದ ನಿವೇಶನದಲ್ಲಿ ರೂ.80 ಲಕ್ಷ ಅನುದಾನದಲ್ಲಿ ಶಾಖಾ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು ಅದರ ಕಾಮಗಾರಿ ಪ್ರಗತಿಯಲ್ಲಿದೆ. ಸಂಘದ ಅಧ್ಯಕ್ಷರಾಗಿ ಸುರೇಶ್ ಕುಮಾರ್ ಸೊರಕೆ, ಉಪಾಧ್ಯಕ್ಷರಾಗಿ ಯಾಕೂಬ್ ಮುಲಾರ್ ಕಾರ್ಯನಿರ್ವಹಿಸುತ್ತಿದ್ದು ನಿರ್ದೇಶಕರಾಗಿ ವಸಂತ ಎಸ್.ಡಿ, ಶಿವನಾಥ ರೈ ಮೇಗಿನಗುತ್ತು, ವಸಂತ ಬಿ.ಎನ್, ಸುಧೀರ್ಕೃಷ್ಣ ಎಂ ಪಡ್ಡಿಲ್ಲಾಯ, ಪದ್ಮಯ್ಯ ಪಿ, ಆನಂದ ಪೂಜಾರಿ ಕೆ, ಕೊರಗಪ್ಪ ಸೊರಕೆ, ಶರಣ್ ರೈ ಎಂ, ನಯನಾ ಗಣೇಶ್ ಸಾಲ್ಯಾನ್ ಹಾಗೂ ನಮಿತಾ ಎಂ ಕಾರ್ಯನಿರ್ವಹಿಸುತ್ತಿದ್ದಾರೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಪ್ರತಿನಿಧಿಯಾಗಿ ಶರತ್ ಡಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಜಯಪ್ರಕಾಶ್ ರೈ ಸಿ ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.













