







ಪುತ್ತೂರು: ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕನ್ನಡ ಶಿಕ್ಷಕ ಚಂದ್ರಶೇಖರ ಸುಳ್ಯಪದವು ಅವರ ಸಮಾಜಮುಖಿ, ಸಾಹಿತ್ಯಿಕ ಮತ್ತು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ, 2026ನೇ ಸಾಲಿನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.


ಬಿ ನ್ಯೂಸ್ ಮತ್ತು ಸಿರಿಗನ್ನಡ ಫೌಂಡೇಶನ್ ಕರ್ನಾಟಕ ಈ ಪ್ರಶಸ್ತಿ ನೀಡುತ್ತಿದ್ದು, ಸೆಪ್ಟೆಂಬರ್ 6 ರಂದು ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯಲಿರುವ ಶಿಕ್ಷಕರ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.













