







ಪುತ್ತೂರು : ಶಾಲಾ ಶಿಕ್ಷಣ ವತಿಯಿಂದ ಸೆಪ್ಟೆಂಬರ್ 3ರಂದು ಹಿರಿಯ ಪ್ರಾಥಮಿಕ ಶಾಲೆ ಮುಂಡೂರು ಇಲ್ಲಿ ನಡೆದ ಸವಣೂರು ವಲಯ ಮಟ್ಟದ 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು ಸವಣೂರು ಸೀತಾರಾಮ ರೈ ಕೆ ಮತ್ತು ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ಶಶಿಕಲಾ ಎಸ್ ಆಳ್ವ ಆಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಶಿವಪ್ರಸಾದ್ ಆಳ್ವ ಮತ್ತು ಭರತ್ರವರು ತರಬೇತಿ ನೀಡಿರುತ್ತಾರೆ.













