ನಗರ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ದ್ವಿತೀಯ

0


ಪುತ್ತೂರು: ಸುದಾನ ವಸತಿಯುತ ಶಾಲೆ ಇಲ್ಲಿ ನಡೆದ 2026-2027ನೇ ಶೈಕ್ಷಣಿಕ ಸಾಲಿನ ವಲಯ ಮಟ್ಟದ 14ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ತಂಡವು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ತಂಡದ ಸದಸ್ಯೆ ದೀಕ್ಷಾ 8ನೇ ತರಗತಿ ಇವರು ಬೆಸ್ಟ್ ಪಾಸರಾಗಿ ವೈಯಕ್ತಿಕ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೊರವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ದೀಕ್ಷಾ ಪಿ ಎನ್ ರವರು ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here