ಸವಣೂರು ವಲಯ ಮಟ್ಟದ ವಾಲಿಬಾಲ್: ಮುಂಡೂರು ಶಾಲಾ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ

0

ಪುತ್ತೂರು: ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 14 ರ ವಯೋಮಾನದ ಬಾಲಕ ಬಾಲಕಿಯರ ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತದೆ.

ಬಾಲಕರ ವಿಭಾಗದಲ್ಲಿ ತಂಡದ ನಾಯಕ ಭವಿತ್ ಬೆಸ್ಟ್ ಸ್ಮಾಷರ್ ಹಾಗೂ ಗುಣ ಸಾಗರ್ ಬೆಸ್ಟ್ ಪಾಸರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ತಂಡದ ನಾಯಕಿ ಖುಷಿ ಅಂಚನ್ ಬೆಸ್ಟ್ ಸ್ಮಾಷರ್ ಹಾಗೂ ಧನ್ವಿತಾ ಬೆಸ್ಟ್ ಪಾಸರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಬಿ ವನಿತಾ ಇವರು ಶಿಕ್ಷಕ ವೃಂದದವರ ಸಹಕಾರದೊಂದಿಗೆ ತರಬೇತಿ ನೀಡಿರುತ್ತಾರೆ ಎಂದು ಶಾಲಾ ಮುಖ್ಯ ಗುರು ವಿಜಯ ಪಿ ಇವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here