






ಸುಳ್ಯ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸುಳ್ಯ ಶಾಖೆಯ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವರ್ಗದವರು ಗ್ರೀನ್ ವ್ಯೂ ಶಾಲೆಗೆ ಭೇಟಿ ನೀಡಿ ಶಿಕ್ಷಕರಿಗೆ ಗೌರವ ಸಲ್ಲಿಸಿ, ಬಹುಮಾನಗಳನ್ನು ನೀಡಿ ಶುಭ ಹಾರೈಸಿದರು.



ಇದೇ ಸಂದರ್ಭದಲ್ಲಿ ಕಲಿಕೆಯಲ್ಲಿ ತರಗತಿವಾರು ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸುಳ್ಯ ಶಾಖೆಯ ಬ್ಯಾಂಕ್ ಮ್ಯಾನೇಜರ್ ಗುರುಪ್ರಸಾದ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಶೀಲಾ ಅವರನ್ನು ಶಾಲಾ ವತಿಯಿಂದ ಮುಖ್ಯೋಪಾಧ್ಯಾಯರಾದ ಇಲ್ಯಾಸ್ ಕಾಶಿಪಟ್ಣ ಹಾಗೂ ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಅಭಿನಂದಿಸಿದರು.




ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ರಂಜಿತ್ ಸ್ವಾಗತಿಸಿದರು. ಶಿಕ್ಷಕ ಪೀರ್ ಸಾಬ್ ವಂದಿಸಿದರು.










