






ಕಾವು: ಮಾಡ್ನೂರು ಗ್ರಾಮದ ಬರೆಕರೆ ನಿವಾಸಿ ಚಂದ್ರಶೇಖರ ಭಟ್ (ವ.87) ರವರು ವಯೋಸಹಜ ಅನಾರೋಗ್ಯದಿಂದ ಸೆ.5ರಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಚಂದ್ರಶೇಖರ ಭಟ್ ರವರು ತಮ್ಮ ವೃತ್ತಿ ಜೀವನದಲ್ಲಿ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅನೇಕ ವರ್ಷಗಳ ಕಾಲ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿ, ಬಳಿಕ ಸುಮಾರು 8 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಸಂಘದ ಅಭಿವೃದ್ಧಿಗೆ ಶ್ರಮಿಸಿದ್ದರು.
ಮೃತರು ಪುತ್ರರಾದ ಹರೀಶ್, ಕೇಶವ ಪ್ರಶಾಂತ ಮತ್ತು ಸೊಸೆಯಂದಿರು ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.
ಮೃತರ ಮನೆಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ನಿರ್ದೇಶಕರಾದ ಶಿವರಾಮ ಪಿ, ನಹುಷ ಭಟ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿ, ನಿವೃತ್ತ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಾದ ಗುಡ್ಡಪ್ಪ ಗೌಡ, ಗಣೇಶ್ ರೈ, ನಿವೃತ್ತ ಶಾಖಾ ವ್ಯವಸ್ಥಾಪಕ ಲಿಂಗಪ್ಪ ನಾಯ್ಕ, ಸಂಘದ ಸಿಬ್ಬಂದಿಗಳು ಸೇರಿದಂತೆ ಅನೇಕ ಗಣ್ಯರು ಆಗಮಿಸಿ ಸಂತಾಪ ಸಲ್ಲಿಸಿದರು.












