ಕೌಟುಂಬಿಕ ಕಲಹ : ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ : ಪ್ರಕರಣ ದಾಖಲು

0

ಪುತ್ತೂರು: ಕೌಟುಂಬಿಕ ಕಲಹಕ್ಕೆ ಸಂಬಂಧಿಸಿ 112ಗೆ ಕರೆ ಬಂದ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ್ದ ಪೊಲೀಸರಿಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಹೆಚ್.ಸಿ. ಮಧು ಮತ್ತು ಸಿಪಿಸಿ ಭೀಮನಗೌಡ ಎಂ. ಬಿರಾದರ್ ಅವರು ಸೆ.04ರಂದು ರಾತ್ರಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದಾಗ ಬಂದ ದೂರಿನ ಮೇರೆಗೆ ಪುತ್ತೂರು ಪಡ್ನೂರು ಗ್ರಾಮದ ಮುಂಡಾಜೆಗೆ ತೆರಳಿದ್ದರು. ಸ್ಥಳದಲ್ಲಿ ಮಹಿಳೆಯೊಬ್ಬರು ತನ್ನ ಗಂಡ ಹಲ್ಲೆ ನಡೆಸಿರುವುದಾಗಿ ತಿಳಿಸಿದ್ದರು. ಈ ಬಗ್ಗೆ ನವೀನ್ ಎಂಬಾತನನ್ನು ವಿಚಾರಿಸಿದಾಗ ಆತ ಕೋಪಗೊಂಡು ಪತ್ನಿಗೆ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ತಡೆಯಲು ಹೋದ ಪೊಲೀಸ್ ಸಿಬ್ಬಂದಿಗಳಿಗೆ ನವೀನ್, ಆತನ ತಾಯಿ ಮತ್ತು ಸಹೋದರ ಸೇರಿ ಅವ್ಯಾಚ್ಯವಾಗಿ ಬೈದು ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರು ನೀಡಲಾಗಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.107/2026, ಕಲಂ 352, 132, 121(1) ಜೊತೆಗೆ 3(5) BNS 2023ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ನವೀನ್ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಡುಗಡೆಯಾದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here