ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ : ದೀಪ್ತಿ ಡಿ.ಕೆ. ಪ್ರಥಮ

0

ಪುತ್ತೂರು: ಉಪ್ಪಿನಂಗಡಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪುತ್ತೂರಿನ ವಿದ್ಯಾರ್ಥಿನಿ ದೀಪ್ತಿ ಡಿ.ಕೆ. ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಸೆ. 6ರಂದು ಉಪ್ಪಿನಂಗಡಿಯ ಎಚ್.ಎಂ. ಆಡಿಟೋರಿಯಂನಲ್ಲಿ ಯುನೈಟೆಡ್ ಕರಾಟೆ ಬುಡೋಕಾನ್ ನ್ಯಾಷನಲ್ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್-2026 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.

ದೀಪ್ತಿ ಅವರು IKMA ಪುತ್ತೂರು ಶಾಖೆಯ ತರಬೇತುದಾರ ಶಿವಪ್ರಸಾದ್ ಕೆ. ಅವರಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದು, ಹಾರಾಡಿ ಸ.ಹಿ.ಪ್ರಾ. ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ.ಇವರು ಬನ್ನೂರು ಕರ್ಮಲ ನಿವಾಸಿ ಪ್ರಾಧ್ಯಾಪಕ ದೀಕ್ಷಿತ್ ಕುಮಾರ್ ಮತ್ತು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಪ್ರೇಮಲತಾ ಜಿ. ಅವರ ಪುತ್ರಿ.

LEAVE A REPLY

Please enter your comment!
Please enter your name here