







ಪುತ್ತೂರು: ಬೆಂಗಳೂರು-ಮಂಗಳೂರು ನಡುವೆ ಪ್ರಾಯೋಗಿಕ ಸಂಚಾರ ನಡೆಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪುತ್ತೂರಿನಲ್ಲಿ ನಿಲುಗಡೆ ಕಲ್ಪಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಲಾಗಿದೆ.ಹಿರಿಯ ವಕೀಲ ಡಾ. ಅರುಣ್ ಶ್ಯಾಮ್ ಎಂ. ಅವರು ಸಚಿವರಿಗೆ ಪತ್ರ ಬರೆದು ಈ ಮನವಿ ಮಾಡಿದ್ದಾರೆ.


ನಿಯಮಿತ ಸೇವೆ ಆರಂಭವಾದಾಗಲೂ ಪುತ್ತೂರನ್ನು ನಿಯಮಿತ ನಿಲುಗಡೆಯಾಗಿ ಉಳಿಸಿಕೊಳ್ಳಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.ಪುತ್ತೂರು ದಕ್ಷಿಣ ಕನ್ನಡದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಮತ್ತು ಆಡಳಿತ ಕೇಂದ್ರವಾಗಿದ್ದು, ಬೆಂಗಳೂರು ಮತ್ತು ಮಂಗಳೂರಿಗೆ ಇಲ್ಲಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುತ್ತಾರೆ. ಆದ್ದರಿಂದ ಪುತ್ತೂರಿನಲ್ಲಿ ನಿಲುಗಡೆ ನೀಡಿದರೆ ಕರಾವಳಿ ಭಾಗದ ಹೆಚ್ಚಿನ ಜನರಿಗೆ ಈ ಪ್ರತಿಷ್ಠಿತ ರೈಲಿನ ಪ್ರಯೋಜನ ಸಿಗಲಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.













