ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗ ಮಂಟಪಕ್ಕೆ ಶಿಲಾನ್ಯಾಸ

0

ನೆಲ್ಯಾಡಿ: ಅಂದಾಜು 45 ಲಕ್ಷ ರೂ.ವೆಚ್ಚದಲ್ಲಿ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಆ.30ರಂದು ಬೆಳಗ್ಗೆ ನಡೆಯಿತು.


ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ನಳಿನ್‌ಕುಮಾರ್, ಮುಂದಿನ ಮಕರ ಸಂಕ್ರಮಣಕ್ಕೆ ಮೊದಲು ಬಯಲು ರಂಗಮಂಟಪ ನಿರ್ಮಾಣ ಆಗಬೇಕಿದೆ. ಇದಕ್ಕೆ ನನ್ನಿಂದಲೂ ಸಹಕಾರ ನೀಡುತ್ತೇನೆ. ಜಾತಿ, ಮತ, ಪಂಥ ಬಿಟ್ಟು ಭಾರತವನ್ನು ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪ ಮಾಡೋಣ ಎಂದರು.


ಮುಖ್ಯ ಅತಿಥಿಗಳಾಗಿದ್ದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಅವರು ಮಾತನಾಡಿ ಸಹಕಾರದ ಭರವಸೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್‌ಕುಮಾರ್ ಅವರು ಯೋಜನೆಯ ಕುರಿತು ಮಾಹಿತಿ ನೀಡಿದರು. ಮುಂಬೈಯ ಉದ್ಯಮಿ ಮೋಹನ ಗೌಡ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಕೊಲ್ಯೊಟ್ಟು, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಕಾರ್ಯದರ್ಶಿ ರಾಕೇಶ್, ಪದಾಧಿಕಾರಿಗಳಾದ ರಘುನಾಥ, ರಮೇಶ್ ಬಾಣಜಾಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ರವಿಚಂದ್ರ ಹೊಸವಕ್ಲು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಧೀರ್‌ಕುಮಾರ್ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು. ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಗ್ರಾ.ಪಂ.ಮಾಜಿ ಸದಸ್ಯ ರವಿಪ್ರಸಾದ್ ಶೆಟ್ಟಿ, ಇಂಜಿನಿಯರ್‌ಗಳಾದ ಶಿವಣ್ಣ ಪಿ.ಹೆಗ್ಡೆ, ಚಂದ್ರಹಾಸ ಪನ್ಯಾಡಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here