ಕಡಬ: ದ್ವಿಚಕ್ರ ವಾಹನಗಳ ಡಿಕ್ಕಿ-ಗಾಯ

0

ಕಡಬ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೆ.4ರಂದು ಸಂಜೆ ಕಡಬದಲ್ಲಿ ನಡೆದಿದೆ.


ಕಡಬ ಕಾಲೇಜು ರಸ್ತೆ ಗ್ರೀನ್‌ಪಾರ್ಕ್ ನಿವಾಸಿ ಗಣೇಶ್ ಪಿ.(63ವ.) ಗಾಯಗೊಂಡವರಾಗಿದ್ದಾರೆ. ಇವರು ಕಡಬ ಪೇಟೆಯಲ್ಲಿರುವ ಎಸ್‌ಬಿಐ ಎಟಿಎಂಗೆ ಹಣ ಡ್ರಾ ಮಾಡಲೆಂದು ತನ್ನ ದ್ವಿಚಕ್ರ ವಾಹನದಲ್ಲಿ ಬಂದವರು ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿ ಎಟಿಎಂ ಕಡೆಗೆ ಬೈಕ್ ತಿರುಗಿಸುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಗಣೇಶ್ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದು ಅವರಿಗೆ ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here