ಸೆ.13:ಪುತ್ತೂರು ತಾ|ಮಟ್ಟದ ದಸರಾ ಕ್ರೀಡಾಕೂಟ

0

ಪುತ್ತೂರು:ಕರ್ನಾಟಕ ಸರ್ಕಾರ,ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ತಾಲೂಕು ಪಂಚಾಯತ್ ಪುತ್ತೂರು, ನಗರಸಭೆ ಪುತ್ತೂರು, ಯುವಜನ ಒಕ್ಕೂಟ ರಿ. ಪುತ್ತೂರು ತಾಲೂಕು. ಸರಕಾರಿ ಪದವಿ ಪೂರ್ವ ಕಾಲೇಜು, ಕೊಂಬೆಟ್ಟು ಹಾಗೂ ಪ್ರೌಢಶಾಲೆ, ವಿವೇಕಾನಂದ ವಿದ್ಯಾಸಂಸ್ಥೆ ನೆಹರುನಗರ, ಪಿಎಂಶ್ರೀ ಕೆಪಿಎಸ್ ಶಾಲೆ ವೀರಮಂಗಲ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿಷ್ಣು ಯುವಶಕ್ತಿ ಬಳಗ ರಿ. ಮಜ್ಜಾರಡ್ಕ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ.13 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಜರಗಲಿದೆ.


ಕೊಂಬೆಟ್ಟು ಕ್ರೀಡಾಂಗಣದಲ್ಲಿ ಮಹಿಳೆಯರಿಗೆ, ಪುರುಷರಿಗೆ ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳು, ಮುಕ್ತ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದೆ. ಕಡಬ ಹಾಗೂ ಪುತ್ತೂರು ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ ಸೆ.13 ರಂದು ವಿವೇಕಾನಂದ ವಿದ್ಯಾಸಂಸ್ಥೆ ನೆಹರುನಗರ ಕ್ರೀಡಾಂಗಣದಲ್ಲಿ ಬೆಳಿಗ್ಗೆ 8.00 ಗಂಟೆಗೆ ಪ್ರಾರಂಭಗೊಳ್ಳಲಿದೆ. ಕಡಬ ಹಾಗೂ ಪುತ್ತೂರು ತಾಲೂಕು ಮಟ್ಟದ ಯೋಗ ಸ್ಪರ್ಧೆ ಪಿಎಂಶ್ರೀ ಕೆಪಿಎಸ್ ಶಾಲೆ ಬೀರಮಂಗಲ ಇಲ್ಲಿ ಬೆಳಿಗ್ಗೆ 8.00ಗೆ ಪ್ರಾರಂಭಗೊಳ್ಳಲಿದೆ

ಹೆಚ್ಚಿನ ಮಾಹಿತಿಗಾಗಿ 8746845280 ನಂಬರಿಗೆ ಸಂಪರ್ಕಿಸಬಹುದು ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಕಡ್ಡಾಯವಾಗಿ ಆನ್ಲೈನ್(https://dasaracmcup.in/) ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಾಲೂಕು ಕ್ರೀಡಾಂಗಣದ ಮೇಲ್ವಿಚಾಕರು ಹಾಗೂ ದಸರಾ ಕ್ರೀಡಾಕೂಟದ ನೋಡಲ್ ಅಧಿಕಾರಿ ಮಾಮಚ್ಚನ್ ಎಂ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here