






ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಸ್ವರ್ಣ ಕವಚ ನಿರ್ಮಾಣಕ್ಕೆ ಸವಣೂರು ವಿದ್ಯಾರಶ್ಮೀ ಸಮೂಹಕ ಶಿಕ್ಷಣ ಸಂಸ್ಥೆಗಳ ಸಂಚಾಲಕರು ಮತ್ತು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು 10 ಗ್ರಾಂ. ಸ್ವರ್ಣವನ್ನು ಸಮರ್ಪಣೆ ಮಾಡಿದರು.


ಸೆ.೮ರಂದು ಬೆಳಿಗ್ಗೆ ದೇವಳಕ್ಕೆ ಅಗಮಿಸಿದ ಅವರು ಶಾಸಕ ಅಶೋಕ್ ಕುಮಾರ್ ರೈ ಅವರ ಉಪಸ್ಥಿತಿಯಲ್ಲಿ ಶ್ರೀ ದೇವರಿಗೆ ಸ್ವರ್ಣ ಸಮರ್ಪಣೆ ಮಾಡಿದರು. ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ದೇವಳದ ಗೌರವಾರ್ಥ ಶಾಲು ಹೊದೆಸಿ ಗೌರವಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ವಳತ್ತಡ್ಕ, ಸುಭಾಷ್ ರೈ ಬೆಳ್ಳಿಪ್ಪಾಡಿ, ಜೀರ್ಣೋದ್ಧಾರ ಸಮಿತಿ ಸದಸ್ಯ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.













