ವಲಯ ಮಟ್ಟದ ಕಬಡ್ಡಿ ಪಂದ್ಯಾಟ; ಪಾಣಾಜೆ ಸುಬೋಧ ಪ್ರೌಢಶಾಲೆಗೆ ಪ್ರಥಮ ಸ್ಥಾನ

0

ಪಾಣಾಜೆ : ಕರ್ನಾಟಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ  ಮೂಡ್ನೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ 7 ರಂದು ಪುತ್ತೂರು ಗ್ರಾಮಾಂತರ ವಲಯ ಮಟ್ಟದ 14 ರ ವಯೋಮಾನದ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪಾಣಾಜೆಯ ಸುಬೋಧ ಪ್ರೌಢಶಾಲೆಯ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ. 

ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್ ಪಿ ತರಬೇತಿ ನೀಡಿರುತ್ತಾರೆ ಎಂದು ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here