ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 54ನೇ ಉಚಿತ ವೈದ್ಯಕೀಯ ಶಿಬಿರ

0

ಪುತ್ತೂರು: ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಮತ್ತು ಆರೋಗ್ಯ ರಕ್ಷಾ ಸಮಿತಿ ಸಂಪ್ಯ ಇದರ ವತಿಯಿಂದ ವಿವಿದ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪ್ರತಿ ತಿಂಗಳು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುವ ಉಚಿತ ವೈದ್ಯಕೀಯ ಶಿಬಿರದ 54ನೇ ಶಿಬಿರವು ಸೆ.6ರಂದು ನಡೆಯಿತು.


ಶಿಬಿರವನ್ನು ಪುತ್ತೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಆಡಳಿತ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್‌ಪಿವೈಎಸ್‌ಎಸ್ ಯೋಗದ ಸಂಪ್ಯ ಶಾಖೆಯ ರಮೇಶ್ ಪ್ರಭು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಕುಮಾರ್ ನಾಯರ್, ಸಂಪ್ಯ ನವಚೇತನಾ ಯುವಕ ಮಂಡಲದ ರವಿನಾಥ ಗೌಡ ಬೈಲಾಡಿ, ಮುಕ್ರಂಪಾಡಿ ಸತ್ಯನಾರಾಯಣ ಪೂಜಾ ಸಮಿತಿಯ ಸಂತೋಷ್ ಮುಕ್ರಂಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸನ್ಮಾನ
ಕಾರ್ಯಕ್ರಮದಲ್ಲಿ ಕನ್ನಡ ಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್-2026ರ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿ ಪುರಸ್ಕೃತರಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಆಡಳಿತ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ಅವರನ್ನು ಸನ್ಮಾನಿಸಲಾಯಿತು.


ಯೋಗ ಬಂಧುಗಳಿಂದ ಸಭಾ ಭವನಕ್ಕೆ ದೇಣಿಗೆ:
ದೇವಸ್ಥಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಭಾ ಭವನದ ಕಾಮಗಾರಿಗಳಿಗೆ ಎಸ್‌ಪಿವೈಎಸ್‌ಎಸ್ ಪುತ್ತೂರು ಇದರ 15ನೇ ಶಾಖೆ ಸಂಪ್ಯ ಇದರ ಯೋಗ ಬಂಧುಗಳಿಂದ ರೂ.50,೦೦೦ ದೇಣಿಗೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾರ ಅವರಿಗೆ ಹಸ್ತಾಂತರ ಮಾಡಿದರು.


ಸಭಾ ಕಾರ್ಯಕ್ರಮದ ಬಳಿಕ ನಡೆದ ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಕೀಲು ಮತ್ತು ಎಲುಬು ವೈದ್ಯಕೀಯ ತಪಾಸಣೆ, ಇಎನ್‌ಟಿ ವೈದ್ಯಕೀಯ ತಪಾಸಣೆ, ದಂತ ವೈದ್ಯಕೀಯ ಚಿಕಿತ್ಸೆ, ಕಣ್ಣಿನ ಪರೀಕ್ಷೆ, ಕೀಲು ಮತ್ತು ಎಲುಬು ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ ನಡೆಸಿ ಆವಶ್ಯಕತೆಯುಲ್ಲವರಿಗೆ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು. ವೈದ್ಯಕೀಯ ತಜ್ಞ ಡಾ. ಸುರೇಶ್ ಪುತ್ತೂರಾಯ, ಆಯುರ್ವೇದ ತಜ್ಞರಾದ ಡಾ. ಸಾಯಿ ಪ್ರಕಾಶ್, ಡಾ. ಭವ್ಯ, ಇಎನ್‌ಟಿ ತಜ್ಞೆ ಡಾ. ಅರ್ಚನಾ, ದಂತ ವೈದ್ಯ ಡಾ. ಕೃತಿಕಾ, ಶ್ವಾಸಕೋಶ ತಜ್ಞ ಡಾ. ಪ್ರೀತಿರಾಜ್ ಬಲ್ಲಾಳ್, ಕೀಲು ಮತ್ತು ಎಲುಬು ತಜ್ಞೆ ಡಾ. ನಾಗಶ್ರೀ ಹಾರಕೆರೆ ಹಾಗೂ ಅಗರವಾಲ್ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞರು ಶಿಬಿರದಲ್ಲಿ ತಪಾಸಣೆ ನಡೆಸಿದರು. ನೂರಾರು ಮಂದಿ ಭಾಗವಹಿಸಿ, ಶಿಬಿರದ ಪ್ರಯೋಜನ ಪಡೆದುಕೊಂಡರು.


ಸಂಪ್ಯ ನವಚೇತನ ಯುವಕ ಮಂಡಲ, ಮುಕ್ರಂಪಾಡಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಐಕ್ಯ ಕಲಾ ಸೇವಾ ಟ್ರಸ್ಟ್ ಪುತ್ತೂರು, ಮಹಾವೀರ ಆಸ್ಪತ್ರೆ, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು ಹಾಗೂ ಹಲವು ಔಷಧಿ ಕಂಪೆನಿಗಳು ಹಾಗೂ ಭಕ್ತಾದಿಗಳು ಶಿಬಿರದಲ್ಲಿ ಸಹಕರಿಸಿದರು. ಮೈಥಿಲಿ ಪ್ರಾರ್ಥಿಸಿದರು. ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಉದಯ ಕುಮಾರ್ ರೈ ಎಸ್ ಸ್ವಾಗತಿಸಿದರು. ಹರಿಣಿ ಪುತ್ತೂರಾಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here