







ನೆಲ್ಯಾಡಿ: ಅನಾರೋಗ್ಯದಿಂದ ಆ.15ರಂದು ನಿಧನರಾದ ನೆಲ್ಯಾಡಿ ಗ್ರಾಮದ ಕೆಳಗಿನಪರಾರಿ ಗುತ್ತು ನಿವಾಸಿ ಪಿ.ಜಯಾನಂದ ಬಂಟ್ರಿಯಾಲ್ ಅವರಿಗೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸಾರ್ವಜನಿಕ ನುಡಿನಮನ ಕಾರ್ಯಕ್ರಮ ಸೆ.10ರಂದು ಸಂಜೆ 4 ಗಂಟೆಗೆ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.


ಪಿ.ಜಯಾನಂದ ಬಂಟ್ರಿಯಾಲ್ ಅವರು ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷರಾಗಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷರಾಗಿ, ನೆಲ್ಯಾಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ನೆಲ್ಯಾಡಿ ಶಬರೀಶ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾಗಿ, ನೆಲ್ಯಾಡಿ ಜೆಸಿಐ ಅಧ್ಯಕ್ಷರಾಗಿ, ನೆಲ್ಯಾಡಿ ಗೆಳೆಯರ ಬಳಗದ ಅಧ್ಯಕ್ಷರಾಗಿ, ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ, ನೆಲ್ಯಾಡಿ ವಲಯ ಬಂಟರ ಸಂಘದ ಸಹ ಸಂಚಾಲಕರಾಗಿ, ಪುತ್ತೂರು ತಾಲೂಕು ಬಂಟರ ಸಂಘದ ಉಪಾಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಇವರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನುಡಿನಮನ ಕಾರ್ಯಕ್ರಮ ನಡೆಯಲಿದೆ.













