







ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜ ಇವರ ಸಂಯುಕ್ತ ಆಶ್ರಯದಲ್ಲಿ ಸೆ.7ರಂದು ನಡೆದ ಕಡಬ ವಲಯ ಮಟ್ಟದ 17ರ ವಯೋಮಾನದ ಬಾಲಕ /ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮಸ್ಥಾನ, ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ., ದಿವ್ಯಾ ಪಿ.ಎನ್., ಕಿಶನ್‌ರಾಜ್ ಹಾಗೂ ರಾಘವ ತರಬೇತಿಯನ್ನು ನೀಡಿರುತ್ತಾರೆ.













