ವೇಟ್ ಲಿಫ್ಟಿಂಗ್ ಸ್ಪರ್ಧೆ– ಫಿಲೋಮಿನ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

0

ಪುತ್ತೂರು: ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರು ( ಆಡಳಿತ) ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಹಾಗೂ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ, ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳು ಒಂದು ಚಿನ್ನ, ನಾಲ್ಕು ಬೆಳ್ಳಿ, ಹಾಗೂ ಎರಡು ಕಂಚಿನ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸುಶಾಂತ್ ಎಂ 60 ಕೆಜಿ ಬಾಲಕರ ವಿಭಾಗದಲ್ಲಿ ಬೆಳ್ಳಿಯ ಪದಕ.ಮಹಮ್ಮದ್ ಮುಬಿನ್ 65 ಕೆಜಿ ಬಾಲಕರ ವಿಭಾಗದಲ್ಲಿ ಬೆಳ್ಳಿಯ ಪದಕ.ನಿಶಾಂತ್ ಸಿ ಎಂ 74 ಕೆಜಿ ಬಾಲಕರ ವಿಭಾಗದಲ್ಲಿ ಬೆಳ್ಳಿಯ ಪದಕ.ಯುಕ್ತ 53 ಕೆ ಜಿ ಬಾಲಕಿಯರ ವಿಭಾಗದಲ್ಲಿ ಬೆಳ್ಳಿಯ ಪದಕ.ವರ್ಷ ಯು 58 ಕೆಜಿ ಬಾಲಕಿಯ ವಿಭಾಗದಲ್ಲಿ ಕಂಚಿನ ಪದಕ.ಹಸ್ತ 63 ಕೆಜಿ ಬಾಲಕಿಯರ ವಿಭಾಗದಲ್ಲಿ ಕಂಚಿನ ಪದಕ.ಡೆಜಿಲ್ ರಾಯ್ 98 kg + ಚಿನ್ನದ ಪದಕವನ್ನು ಪಡೆದು ರಾಜ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಇವರನ್ನು ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ನರೇಶ್ ಲೋಬೊ ಹಾಗೂ ಧನ್ಯಶ್ರೀ ತರಬೇತಿ ನೀಡಿರುತ್ತಾರೆ.ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಶಿಕ್ಷಕರು ಮತ್ತು ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳು ಅಭಿನಂದನೆಯನ್ನು ಸಲ್ಲಿಸಿದ್ದು ರಾಜ್ಯಮಟ್ಟದ ಸ್ಪರ್ಧೆಗೆ ಶುಭ ಹಾರೈಸಿರುತ್ತಾರೆ.

LEAVE A REPLY

Please enter your comment!
Please enter your name here