ಬೆಟ್ಟಂಪಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ

0

ಬೆಟ್ಟಂಪಾಡಿ: ಶ್ರೀ ಕ್ಷೇತ್ರ ಬೆಟ್ಟಂಪಾಡಿ ಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳು ಸೆ. 6 ರಂದು ಶ್ರೀ ಕ್ಷೇತ್ರದ ವಠಾರದಲ್ಲಿ ಜರಗಿತು.



ಬೆಳಿಗ್ಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಶರತ್ ಕುಮಾರ್ ಪಾರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಬಳಿಕ ವಿವಿಧ ಸ್ಪರ್ಧೆಗಳು ಜರಗಿದವು. ತೀರ್ಪುಗಾರರಾಗಿ ವಿದುಷಿ ಗೌತಮಿ ಅನುದೀಪ್, ಶಿಕ್ಷಕಿ ರೂಪಾ ಹಾಗೂ ಗೋಪಾಲಕೃಷ್ಣ ಮಿತ್ತಡ್ಕ ಮತ್ತು ಕ್ರೀಡಾ ತೀರ್ಪುಗಾರರಾಗಿ ಸೀತರಾಮ ಗೌಡ ಮಿತ್ತಡ್ಕ ಸಹಕರಿಸಿದರು.



ಸಂಜೆ ಸಮಾರೋಪ ನಡೆದು ಬಹುಮಾನ‌ ವಿತರಣೆ ನಡೆಯಿತು. ಶಿವರಾಮ ಭಟ್ ಸೌರಭ ಇರ್ದೆ ಹಾಗೂ ಹಾರಾಡಿ ಶಾಲಾ ಶಿಕ್ಷಕ ಜನಾರ್ದನ ದುರ್ಗ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು.



ಸಮಿತಿಯ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಸಂಚಾಲಕ ಡಾ. ಸುಬ್ರಹ್ಮಣ್ಯ ವಾಗ್ಲೆ, ಅಧ್ಯಕ್ಷ ಮಹೇಶ್ ಕೋರ್ಮಂಡ, ಕಾರ್ಯದರ್ಶಿ ಉದಯ ಕುಮಾರ್ ಹಾಗೂ ಕೋಶಾಧಿಕಾರಿ ಜಗದೀಶ್ ಗೌಡ ಪಾರ ಉಪಸ್ಥಿತರಿದ್ದರು. ಸಮಿತಿ ಪದಾಧಿಕಾರಿಗಳು ಸಹಕರಿಸಿದರು. ಶಿವಪ್ರಸಾದ್ ತಲೆಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು‌.


LEAVE A REPLY

Please enter your comment!
Please enter your name here