ನಾಳೆ (ಸೆ.12): ಕಾಮಧೇನು ಮಹಿಳಾ ಸಹಕಾರಿ ಸಂಘದ ಮಹಾಸಭೆ

0

ವಿಕಲಚೇತನರಿಗೆ ಸವಲತ್ತು ವಿತರಣೆ, ಕ್ರೀಡಾ ಸಾಧಕರಿಗೆ ಸನ್ಮಾನ, ಕೈಪಿಡಿ ಬಿಡುಗಡೆ

ನೆಲ್ಯಾಡಿ: ನಾಲ್ಕು ವರ್ಷದ ಹಿಂದೆ ನೆಲ್ಯಾಡಿಯಲ್ಲಿ ಆರಂಭಗೊಂಡಿರುವ ಕಾಮಧೇನು ಮಹಿಳಾ ಸಹಕಾರ ಸಂಘದ ೨೦೨೫-೨೬ನೇ ಸಾಲಿನ ಮಹಾಸಭೆ ಹಾಗೂ ವಿಕಲಚೇತನರಿಗೆ ವಿಶೇಷ ಸವಲತ್ತು ವಿತರಣೆ, ಕ್ರೀಡಾ ಸಾಧಕರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ‘ಕಾಮಧೇನು ಸಹಕಾರ ಕಿರಣ’ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಸೆ.12ರಂದು ಬೆಳಗ್ಗೆ ೧೦.೩೦ಕ್ಕೆ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆಯಲಿದೆ.


ಸಂಘದ ಮಹಾಸಭೆಯ ಬಳಿಕ ವಿಕಲಚೇತನರಿಗೆ ಆಸರೆ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು ಇದರಲ್ಲಿ ವಿಕಲಚೇತನರಿಗೆ ವಿಶೇಷ ಸವಲತ್ತು ವಿತರಣೆ ನಡೆಯಲಿದೆ. ಜೊತೆಗೆ ಕ್ರೀಡಾ ಸಾಧಕರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ, ಸಂಘದ ಯಶಸ್ವಿ ಪಯಣವನ್ನು ಪ್ರತಿ ಬಿಂಬಿಸುವ ಕಾಮಧೇನು ಸಹಕಾರ ಕಿರಣ ಕೈಪಿಡಿ ಬಿಡುಗಡೆ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಯು.ಟಿ.ಖಾದರ್, ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರೂ, ಬೆಸ್ಟ್ ಫೌಂಡೇಶನ್‌ನ ಸ್ಥಾಪಕರೂ ಆದ ರಕ್ಷಿತ್ ಶಿವರಾಂ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಜೈನ್, ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕಿ ತನುಜಾ, ಎಸ್‌ಎಲ್‌ವಿ ಬುಕ್ ಕಂಪನಿ ಮಾಲಕ ದಿವಾಕರ್ ದಾಸ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷೆ ಉಷಾ ಅಂಚನ್, ಕಾರ್ಯನಿರ್ವಹಣಾಧಿಕಾರಿ ಚೈತನ್ಯ ಹೆಚ್.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here