ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕ್ರಾಸ್ ಕಂಟ್ರಿ ತಂಡಕ್ಕೆ ಪ್ರಥಮ ರನ್ನರ್ ಅಪ್ ಪ್ರಶಸ್ತಿ

0


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿಯರ ತಂಡವು 28ನೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್‌ಕಾಲೇಜು ಕ್ರಾಸ್-ಕಂಟ್ರಿ ಸ್ಪರ್ಧೆಯ ಮಹಿಳೆಯರ ವಿಭಾಗದಲ್ಲಿ ಪ್ರಥಮ ರನ್ನರ್-ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮೈಸೂರಿನ ವಿಟಿಯು ಪ್ರಾದೇಶಿಕ ಕೇಂದ್ರದಲ್ಲಿ ನಡೆದ ಸ್ಪರ್ಧೆಯಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ.


ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಅರ್ಪಿತಾ ಬಾಲಚಂದ್ರ ನಾಯ್ಕ್, ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಅನಘಾ.ಕೆ.ಎನ್, ದ್ವಿತೀಯ ವರ್ಷದ ಎಐಎಂಎಲ್ ವಿಭಾಗದ ಸಿಂಚನಾ.ಬಿ.ಆರ್, ದ್ವಿತೀಯ ವರ್ಷದ ಡೇಟಾ ಸೈನ್ಸ್ ವಿಭಾಗದ ವಾಣಿ ಲಕ್ಷ್ಮಣ್ ಲಮಾಣಿ, ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಅನನ್ಯ.ಕೆ.ಬಿ ಹಾಗೂ ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ಬಬಿತಾ.ಯು ಅವರನ್ನೊಳಗೊಂಡ ಕಾಲೇಜಿನ ತಂಡವು ಈ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು.


ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸಿಕೊಂಡಿರುವ ಬಬಿತಾ.ಯು ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರಾಸ್-ಕಂಟ್ರಿ ಓಟದ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುವುದಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರು ಮಾರ್ಗದರ್ಶನ ನೀಡಿದ್ದರು ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here