






ಕಾಣಿಯೂರು : ಸೆಪ್ಟೆಂಬರ್ 11 ರಂದು ಕೊಪ್ಪ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಪುತ್ತೂರು ಇದರ ವತಿಯಿಂದ ಮಾಡಲಾಯಿತು.


ರೋಟೇರಿಯನ್ ಪಿ. ಡಿ. ಕೃಷ್ಣಕುಮಾರ್ ರವರು ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಿ ಶುಭ ಹಾರೈಸಿದರು. ಇವರಿಗೆ ನಮ್ಮ ಶಾಲಾ ಎಸ್ ಡಿ ಎಂ ಸಿ, ಪೋಷಕರು, ಶಿಕ್ಷಕ ವೃಂದ ಹಾಗೂ ಮಕ್ಕಳ ಪರವಾಗಿ ಧನ್ಯವಾದಗಳು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಜ್ಯೋತಿ ದೇವರಮನೆ ಹಾಗೂ ಶಿಕ್ಷಕವೃಂದದವರು ಉಪಸ್ಥಿತರಿದ್ದರು.













