






ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 43ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸೆ 14 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಅರ್ಚಕ ವೇದಮೂರ್ತಿ ಶಿವಪ್ರಸಾದ್ ಕಡಮಣ್ಣಾಯ ಇವರ ಪೌರೋಹಿತ್ಯದಲ್ಲಿ ಬೆಳಿಗ್ಗೆ 6.30ಕ್ಕೆ ಶ್ರೀ ಗಣೇಶ ವಿಗ್ರಹ ಪ್ರತಿಷ್ಠೆ ನಡೆಯಲಿದೆ. ನಂತರ ಭಗವಾಧ್ವಜಾರೋಹಣ, ವಿವಿಧ ಭಜನಾ ತಂಡಗಳಿಂದ ಭಜನಾ ಸೇವಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಗಣಹೋಮ, ಮಹಾಪೂಜೆ ನಡೆಯಲಿದೆ.
ಸಭಾ ಕಾರ್ಯಕ್ರಮ
ಮಧ್ಯಾಹ್ನ 12 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಭಾಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ವಹಿಸಲಿದ್ದು, ಮುಖ್ಯ ಭಾಷಣಗಾರರಾಗಿ ಪುತ್ತೂರು ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷರಾದ ಮೂಲಚಂದ್ರ ಕುಕ್ಕಾಡಿ ಭಾಗವಹಿಸಲಿದ್ದು, ಮುಖ್ಯಅತಿಥಿಗಳಾಗಿ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ದಿವ್ಯನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಶ್ರೀ ವಿನಾಯಕನ ಆಕರ್ಷಕ ಶೋಭಾಯಾತ್ರೆ
ಸಂಜೆ 3 ಗಂಟೆಗೆ ಭಾಗವಧ್ವಜಾವರೋಹಣ ನಡೆದು ಬಳಿಕ ವಿವಿಧ ಭಜನಾ ತಂಡಗಳೊಂದಿಗೆ ಶ್ರೀ ವಿನಾಯಕನ ಆಕರ್ಷಕ ಶೋಭಾಯಾತ್ರೆ ದೇವಸ್ಥಾನದಿಂದ ಹೊರಟು ಕಾವು ಪಂಚವಟಿ ನಗರ, ಶಿವನಗರ ಮೂಲಕ ಅಮ್ಮ್ಚಿನಡ್ಕ ಸೀರೆ ಹೊಳೆಯಲ್ಲಿ ವಿಗ್ರಹ ವಿಸರ್ಜನೆ ನಡೆಯಲಿದೆ. ಬಳಿಕ ಸಂಜೆ 7 ಗಂಟೆಗೆ ದೇವಾಲಯದಲ್ಲಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ಸೋಮವಾರ ಪೂಜೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ನವೀನ್ ನನ್ಯ ಪಟ್ಟಾಜೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












