ತಾಲೂಕು ಮಟ್ಟಕ್ಕೆ ಆಯ್ಕೆಯಾದ ಮುಂಡೂರು ಶಾಲಾ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

0

ಪುತ್ತೂರು: ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮುಂಡೂರು ಇಲ್ಲಿನ ವಿದ್ಯಾರ್ಥಿಗಳಿಗೆ ದಾನಿಗಳ ಪ್ರಾಯೋಜಕತ್ವದಲ್ಲಿ ಕ್ರೀಡಾ ಸಮವಸ್ತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ರೀಡಾ ಸಮವಸ್ತ್ರದ ಪ್ರಾಯೋಜಕರಲ್ಲಿ ಒಬ್ಬರಾದ ಹಿರಿಯ ವಿದ್ಯಾರ್ಥಿ ನಿತಿನ್ (ದುಬೈ) ಅವರ ತಾಯಿ ಸುಜಾತ ಗುರುವಪ್ಪ ನಾಯ್ಕ, ಬಂಡಿಕಾನ ಅವರು ಆಗಮಿಸಿ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರಗಳನ್ನು ಹಸ್ತಾಂತರಿಸಿ, ತಾಲೂಕು ಮಟ್ಟದ ಪಂದ್ಯಾಟಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಮವಸ್ತ್ರ ಪ್ರಾಯೋಜಕರಾಗಿ ಸಹಕರಿಸಿದ ನಿತಿನ್, ರಶ್ಮಾ ಮೋಹಿತ್ ಶೆಟ್ಟಿ (ಮುಂಬೈ), ಪ್ರಭಾಕರ ಆಳ್ವ (ಬಜನಿ ಗುತ್ತು), ಅರ್ಪಿತ ವಿನೋದ್ (ಮಸ್ಕತ್) ಹಾಗೂ ಪವನ್ ಇಡಾಲ (ಪೆರಾಬೆ) ಅವರನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ್ ಅಂಬಟ ಅವರು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಶ್ರೀ ರಾಮಚಂದ್ರ ಬಿ. ಅವರು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವನಿತಾ ವಂದಿಸಿದರು. ಶಿಕ್ಷಕ ವೃಂದದವರ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕ ಅಬ್ದುಲ್ ಬಶೀರ್ ನಿರ್ವಹಿಸಿದರು.

LEAVE A REPLY

Please enter your comment!
Please enter your name here