ಸೆ.14-15 ಸಂಪ್ಯ ನವಚೇತನ ಯುವಕ ಮಂಡಲದ 44ನೇ ಗಣೇಶೋತ್ಸವದ ಸಂಭ್ರಮ

0

ಪುತ್ತೂರು:ಸಂಪ್ಯ ಶ್ರೀರಾಮ ನಗರದ ನವಚೇತನಾ ಯುವಕ ಮಂಡಲದ ವತಿಯಿಂದ ನಡೆಯುವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.14 ಹಾಗೂ 15ರಂದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮಿಸಲಿದೆ.

ವೇ.ಮೂ ಸಂದೀಪ ಕಾರಂತ ಕಾರ್ಪಾಡಿಯವರ ನೇತೃತ್ವದಲ್ಲಿ ನಡೆಯಲಿರುವ ಗಣೇಶೋತ್ಸವದಲ್ಲಿ ಸೆ.14ರಂದು ಬೆಳಿಗ್ಗೆ ಗಣಪತಿ ವಿಗ್ರಹ ಪ್ರತಿಷ್ಠೆ, ಗಣಹೋಮ, ಮಕ್ಕಳಿಗೆ ವಿಗ್ರಹ ರಚನೆ ಸ್ಪರ್ಧೆ, ಮಹಿಳೆಯರಿಗೆ ವಿಶೇಷ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬೊಳುವಾರು ಮಹಾವೀರ ಆಸ್ಪತ್ರೆಯ ವೈದ್ಯರು ನವಚೇತನ ಯುವಕ ಮಂಡಲದ ಗೌರವಾಧ್ಯಕ್ಷರು ಆಗಿರುವ ಡಾ.ಸುರೇಶ್ ಪುತ್ತೂರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಪ್ರಾಂಶುಪಾಲ ಸೂರ್ಯನಾರಾಯಣ ಬಿ.ವಿ. ಅವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಂಸದ ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ, ಉದ್ಯಮಿಗಳಾದ ಶಿವರಾಮ ಆಳ್ವ, ಉಮೇಶ್ ನಾಡಾಜೆ, ಜೆ,ಕೆ ಕನ್‌ಸ್ಟçಕ್ಷನ್‌ನ ಮ್ಹಾಲಕ ಜಯಕುಮಾರ್ ನಾಯರ್, ಮಹಾವೀರ ಆಸ್ಪತ್ರೆಯ ವೈದ್ಯ ಡಾ.ಸಾಯಿಪ್ರಕಾಶ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸೀತಾರಾಮ ಪ್ರತಿಭಾ ಪುರಸ್ಕಾರ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗು ರಾತ್ರಿ ತಾಂಬೂಲ ಕಲಾವಿದೆರ್ ಪುಂಜಾಲಕಟ್ಟೆ ಇವರಿಂದ `ಎಲ್ಲೆ ದಾದ ಏರೆಗ್ ಗೊತ್ತು‘ ಎಂಬ ತುಳು ಹಾಸ್ಯಮಯ ನಾಟಕ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಸೆ.15ರಂದು ಬೆಳಿಗ್ಗೆ ಗಣಪತಿಹೋಮ, ಸತ್ಯನಾರಾಯಣ ಪೂಜೆ, ಕುಣಿತ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದ ಬಳಿಕ ಶ್ರೀ ದೇವರ ವೈಭವದ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯು ದೇವಸ್ಥಾನದ ಬಳಿಯಿಂದ ಹೊರಟು ಮುಖ್ಯರಸ್ತೆಯಾಗಿ ಮುಕ್ರಂಪಾಡಿ, ಮೊಟ್ಟೆತ್ತಡ್ಕ ತನಕ ತೆರಳಿ ನಂತರ ಸಂಪ್ಯ ದೇವಸ್ಥಾನಕ್ಕೆ ಹಿಂತಿರುಗಿ ದೇವಸ್ಥಾನದ ಬಳಿಯ ಕೆರೆಯಲ್ಲಿ ವಿಗ್ರಹ ಜಲಸ್ತಂಬನದೊಂದಿಗೆ ಗಣೇಶೋತ್ಸವವು ಸಂಪನ್ನಗೊಳ್ಳಲಿದೆ ಎಂದು ನವಚೇತನ ಯುವಕ ಮಂಡಲದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here