







ಆ.28 ಧಾರ್ಮಿಕ ಸಭೆ
ಸೆ.16 ಶೋಭಾಯಾತ್ರೆ


ಪುತ್ತೂರು: ಪುರುಷರಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ 26ನೇ ವರ್ಷದ ಸಂಭ್ರಮವು ಸೆ.14 ರಿಂದ ಪ್ರಾರಂಭಗೊಂಡ ಸೆ.16ರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪುರುಷರಕಟ್ಟೆಯ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಮುಂಭಾಗದಲ್ಲಿ ಸಂಭ್ರಮಿಸಲಿದೆ.
ಸೆ.14ರಂದು ಬೆಳಿಗ್ಗೆ ಶ್ರೀಗಣೇಶನ ವಿಗ್ರಹ ಪ್ರತಿಷ್ಠೆ, ಪ್ರಾರ್ಥನೆ, ಗಣಪತಿ ಹೋಮ, ಸ್ಥಳ ಶುದ್ದಿಯೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ನಂತರ ವಿವಿಧ ಭಜನಾ ಮಂಡಳಿಯವರಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಅಪರಾಹ್ನ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನಂತರ ಸಾಯಿಕಲಾ ಯಕ್ಷ ಬಳಗದ ಶಿವರಾಮ ಕಾರಂತ ಬಾಲವನ ಇವರಿಂದ “ಶ್ರೀದೇವಿ ನೀಲಾಮೃತ” ಯಕ್ಷಗಾನ ನಡೆಯಲಿದೆ.
ಎರಡನೇ ದಿನವಾದ ಸೆ.15ರಂದು ಬೆಳಿಗ್ಗೆ ಗಣಹೋಮ, ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅನಿಲ್ ಮುಂಡೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಕಿಶೋರ್ ಬೊಟ್ಯಾಡಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಡಿ., ಮೇಘಾ ಫ್ರುಟ್ ಪ್ರೈವೆಟ್ ಲಿಮಿಟೆಡ್ನ ಆಡಳಿತ ನಿರ್ದೇಶಕ ಸತ್ಯಶಂಕರ್ ಭಟ್, ಗಣೇಶೋತ್ಸವ ಸಮಿತಿ ಸ್ಥಾಪಕ ಅಧ್ಯಕ್ಷ ಬಿ.ಕೆ ಶ್ರೀನಿವಾಸ್ ರಾವ್, ಗಣೇಶೋತ್ಸವದ ಬೆಳ್ಳಿ ಹಬ್ಬ ಸಮಿತಿ ಅಧ್ಯಕ್ಷ ಉಮೇಶ್ ಇಂದಿರಾನಗರ, ಪ್ರಗತಿಪರ ಕೃಷಿಕ ಹೊನ್ನಪ್ಪ ಪೂಜಾರಿ ಕೈಂದಾಡಿ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ದೇವಿಪ್ರಸಾದ್ ಪ್ರಭು ಉದಯಭಾಗ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರ ಸಾಧಕರಿಗೆ ಸನ್ಮಾನ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು ನಂತರ ವಿದುಷಿ ವಿದ್ಯಾ ಮನೋಜ್ ಶಿಷ್ಯೆಯರಿಂದ ಭರತ ನೃತ್ಯ ಸಿಂಚನ ನಡೆಯಲಿದೆ.
ಗಣೇಶೋತ್ಸವದ ಕೊನೆಯ ದಿನವಾದ ಸೆ.16ರಂದು ವಿವಿಧ ಭಜನಾ ಮಂಡಳಿಯವರಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ರಂಗ ಕೇಸರಿ ರಮೇಶ್ ರೈ ಕುಕ್ಕುವಳ್ಳಿ ಸಾರಥ್ಯದ ಪ್ರಕೃತಿ ಕಲಾವಿದೆರ್ ಕುಡ್ಲ ಅಭಿನಯದ `ಕೃಷ್ಣಣ್ಣ ಬೇಗ ಬಲೇ‘ ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ. ಸಂಜೆ ಮಹಾಪೂಜೆ, ಪ್ರಸಾದ ವಿತರಣೆಯ ಬಳಿಕ ಶ್ರೀಗಣೇಶನ ವಿಗ್ರಹದ ವೈಭವದ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯು ಪುರುಷರಕಟ್ಟೆಯಿಂದ ಹೊರಟು ಇಂದಿರಾನಗರ, ಕೂಡುರಸ್ತೆ ಮಾರ್ಗವಾಗಿ ಸಂಚರಿಸಿ ಕಲ್ಕಾರ್ನಲ್ಲಿ ಜಲಸ್ಥಂಭನಗೊಳ್ಳುವ ಮೂಲಕ ಬೆಳ್ಳಿಹಬ್ಬದ ಗಣೇಶೋತ್ಸವವು ಸಂಪನ್ನಗೊಳ್ಳಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಬೆಳ್ಳಿಹಬ್ಬ ಸಮಿತಿಯ ಪ್ರಕಟಣೆ ತಿಳಿಸಿದೆ.













