ಸರ್ಕಾರಿ ಪ್ರೌಢಶಾಲೆ ಉಪ್ಪಿನಂಗಡಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ಪುತ್ತೂರು: ಸರ್ಕಾರಿ ಪ್ರೌಢಶಾಲೆ, ಉಪ್ಪಿನಂಗಡಿಯಲ್ಲಿ ಸೆ.11ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರೌಢಶಾಲೆ, ಉಪ್ಪಿನಂಗಡಿಯ ಉಪಪ್ರಾಂಶುಪಾಲರಾದ ದೇವಕಿ ಅವರು ವಹಿಸಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನಂಗಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ಕೆ. ಪಿ. ಅವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಶಶಿಧರ ಎಂ., ಯೋಜನಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಇವರು ಉಪಸ್ಥಿತರಿದ್ದು, ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಲೋಕೇಶ್ ಬೆತ್ತೋಡಿ, ಅಧ್ಯಕ್ಷರು, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಪುತ್ತೂರು ತಾಲೂಕು; ಪ್ರಶಾಂತ್ ಪೆರಿಯಡ್ಕ, ಅಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಉಪ್ಪಿನಂಗಡಿ ವಲಯ; ಹಾಗೂ ಫಾರೂಕ್ ಝಿಂದಗಿ ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಸರ್ಕಾರಿ ಪ್ರೌಢಶಾಲೆ, ಉಪ್ಪಿನಂಗಡಿ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಶಿವಪ್ಪ ಎಂ. ಕೆ., ಮೇಲ್ವಿಚಾರಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಪ್ಪಿನಂಗಡಿ ವಲಯ, ಇವರು ನೆರವೇರಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಜಯರಾಮ ಪೂಜಾರಿ, ನಿವೃತ್ತ ಆರೋಗ್ಯಾಧಿಕಾರಿ, ಮಂಗಳೂರು, ಇವರು ಭಾಗವಹಿಸಿದ್ದರು. ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, “ಮಾದಕ ವಸ್ತುಗಳಿಗೆ ಇಲ್ಲ ಎಂದು ಹೇಳೋಣ” ಎಂಬ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಂದ ಸ್ವೀಕರಿಸಿದರು.



ಶಿಕ್ಷಕರಾದ ಸಂದೀಪ್ ಕುಮಾರ್, ಮಯೂರ್ ಪಿ. ಎಂ., ವಿ ವಿಜಯಕುಮಾರ್ ನಾಯ್ಕ್, ಪೂರ್ಣಿಮಾ ನಾಯಕ್,ಪಲ್ಲವಿ ಡಿ. ಯನ್, ಸೇವಾಪ್ರತಿನಿಧಿ ಉಷಾ ಹರೀಶ್ ಸಹಕರಿಸಿದರು. ಶಿಕ್ಷಕರಾದ ಲಕ್ಷ್ಮೀಶ ನಾಯ್ಕ್ ಪಿ. ಕಾರ್ಯಕ್ರಮ ನಿರೂಪಣೆ ಮತ್ತು ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿಗಳಿಗೆ ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನ ನಡೆಸುವ ಕುರಿತು ಉತ್ತಮ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.

LEAVE A REPLY

Please enter your comment!
Please enter your name here