ಸೆ.14-16 : ದೋಂತಿಲ ಶ್ರೀ ಮಹಾವಿಷ್ಣು, ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವ

0

ನೆಲ್ಯಾಡಿ: ದೋಂತಿಲ ಶ್ರೀ ಮಹಾವಿಷ್ಣು, ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆ. 14 ರಿಂದ ಸೆ.16ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕಾರ್ಯಕ್ರಮಗಳ ವಿವರ:
ಬೆಳಿಗ್ಗೆ 7ರಿಂದ ದೇವಸ್ಥಾನದಲ್ಲಿ ತೆನೆ ಕಟ್ಟುವುದು, 9.30ರಿಂದ ಗಣೇಶ ವಿಗ್ರಹ ಪ್ರತಿಷ್ಠೆ ಮತ್ತು ಗಣಪತಿ ಹೋಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ರಾತ್ರಿ ಗಂಟೆ 8.00ರಿಂದ ದೋಂತಿಲ ಚಾಮುಮಡೇಶ್ವರಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ 9.30ಕ್ಕೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ. ಸೆ.15, ಮಂಗಳವಾರದಂದು ; ಬೆಳಿಗ್ಗೆ 8.00ರಿಂದ ನಿತ್ಯಪೂಜೆ, ಮಧ್ಯಾಹ್ನ 12.00ಕ್ಕೆ ಶ್ರೀ ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾ ಸಂಘ, ಕುಂಡಡ್ಕ, ಇವರಿಂದ ಯಕ್ಷಗಾನ ತಾಳಮದ್ದಳೆ ‘ಧಕ್ಷಾಧ್ವರ’, ರಾತ್ರಿ 9.00 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ.

ಸೆ.16 ಬುಧವಾರದಂದು, ಬೆಳಿಗ್ಗೆ 8.00 ಗಂಟೆಗೆ ಶ್ರೀ ಮಹಾವಿಷ್ಣು, ಸುಬ್ರಹ್ಮಣ್ಯೇಶ್ವರ ದೇವರಿಗೆ ವಿಶೇಷ ಪೂಜೆ, 8.30ಕ್ಕೆ ಆಹ್ವಾನಿತ ಭಜನಾ ತಂಡಗಳಿAದ ಭಜನಾ ಕಾರ್ಯಕ್ರಮ, 10.00 ಗಂಟೆಗೆ ಶ್ರೀ ಮಹಾಗಣಪತಿ ಹೋಮ ಪ್ರಾರಂಭ, ಮಧ್ಯಾಹ್ನ 12.00 ಗಂಟೆಗೆ ಹೋಮದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ. ಸಾಯಂಕಾಲ 6.30ರಿಂದ ಶ್ರೀ ವಿನಾಯಕ ಯಕ್ಷಗಾನ ಮಂಡಳಿ ರಾಮನಗರ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ, ‘ನಳ ದಮಯಂತಿ’, ರಾತ್ರಿ 9.00 ಗಂಟೆಗೆ ಮಹಾಗಣಪತಿ ದೇವರಿಗೆ ರಂಗಪೂಜೆ, ಬಳಿಕ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ. ರಾತ್ರಿ 10.00 ಗಂಟೆಗೆ ಗಣಪತಿ ವಿಗ್ರಹದ ಜಲಸ್ತಂಭನಾ ಮೆರವಣಿಗೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು-ಮನ-ಧನಗಳ ಸಹಕಾರವನ್ನಿತ್ತು ವಿಘ್ನವಿನಾಶಕನ ಕೃಪಾಕಟಾಕ್ಷಕ್ಕೆ ಪಾತ್ರರಾಗುವಂತೆ ಸಮಿತಿಯವರು ವಿನಂತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here