ಸೆ.14: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, ರಂಗಪೂಜೆ

0

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಭಕ್ತ ಮಹಾಜನರ ಸಹಕಾರದೊಂದಿಗೆ ಸೆ.14ರಂದು ಬೆಳಗ್ಗೆ 8 ರಿಂದ 108 ಕಾಯಿ ಗಣಹೋಮ, ರಂಗಪೂಜೆ ಸಹಿತ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಕೆ., ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಯೇಸುರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here