ಸೆ.14: ಮುದ್ಯದಲ್ಲಿ 13ನೇ ವರ್ಷದ ಶ್ರೀ ಗಣೇಶೋತ್ಸವ, ಧಾರ್ಮಿಕ ಸಭೆ

0

ಉಪ್ಪಿನಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುದ್ಯ ಇದರ ವತಿಯಿಂದ 13ನೇ ವರ್ಷದ ಶ್ರೀ ಗಣೇಶೋತ್ಸವ ಮತ್ತು ಧಾರ್ಮಿಕ ಸಭೆ ಸೆ.14ರಂದು ಮುದ್ಯ ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಬೆಳಗ್ಗೆ 7ಕ್ಕೆ ವಿದ್ಯಾಗಣಪತಿ ಪ್ರತಿಷ್ಠೆ ನಡೆಯಲಿದೆ. 8 ಗಂಟೆಗೆ 12 ತೆಂಗಿನಕಾಯಿಯ ಗಣಹವನ, 8.30ಕ್ಕೆ ಶ್ರೀ ಪಂಚಲಿಂಗೇಶ್ವರ ದೇವರಿಗೆ ನಿತ್ಯಪೂಜೆ, ಬಳಿಕ ಮುದ್ಯ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯವರಿಂದ ಭಜನೆ ನಡೆಯಲಿದೆ. 10.30ರಿಂದ ದೇವರಿಗೆ ರಂಗಪೂಜೆ, ಮಹಾಪೂಜೆ ನಡೆಯಲಿದೆ.

ಧಾರ್ಮಿಕ ಸಭೆ:
ಬೆಳಗ್ಗೆ 11.30ರಿಂದ ಧಾರ್ಮಿಕ ಸಭೆ ನಡೆಯಲಿದ್ದು ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ಉಪನ್ಯಾಸಕ ಚೇತನ್ ಆನೆಗುಂಡಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕ ಶ್ರೀ ಗಣೇಶೋತ್ಸವ ಉತ್ಸವ ಸಮಿತಿ ಅಧ್ಯಕ್ಷ ದಾಮೋದರ ಗೌಡ ಶೇಡಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಊರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಶೋಭಾಯಾತ್ರೆ:
ಅಪರಾಹ್ನ 2.30ರಿಂದ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಹೊರಟು ಪಡ್ಪು ದೈವಸ್ಥಾನದ ಮುಂಭಾಗದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ನೀರಕಟ್ಟೆಯಿಂದ ವಳಾಲು, ಮುಗೇರಡ್ಕ ಕ್ರಾಸ್, ಬೆದ್ರೋಡಿ ಮೂಲಕ ಸಾಗಲಿದೆ. ಸಂಜೆ 5.30ಕ್ಕೆ ಬೆದ್ರೋಡಿ ಶ್ರೀ ಸಿದ್ಧಿವಿನಾಯಕ ಭಜನಾ ತಂಡದವರಿಂದ ಭಜನೆ, ಸಂಜೆ 6.30ಕ್ಕೆ ಜಲಸ್ತಂಭನ ಸ್ಥಳದಲ್ಲಿ ಕಟ್ಟೆಪೂಜೆ, ರಾತ್ರಿ 7ಕ್ಕೆ ಬೆದ್ರೋಡಿ ನರ್ಸರಿ ಬಳಿಯ ನೇತ್ರಾವತಿ ನದಿಯಲ್ಲಿ ದೇವರ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಪೂಜಾರಿ ಒರುಂಬೋಡಿ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here