ಉಪ್ಪಿನಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸೇವಾ ಟ್ರಸ್ಟ್‌ನ ವತಿಯಿಂದ ಐದು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿರುವ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಸೆ.14ರಂದು ಅದ್ದೂರಿಯ ಚಾಲನೆ ನೀಡಲಾಯಿತು.


ಬಿಎಸ್ಸೆಸ್ಸೆಫ್‌ನ ನಿವೃತ್ತ ಡೆಪ್ಯೂಟಿ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಟೀಮ್ ದಕ್ಷಿಣ ಕಾಶಿಯ ಅಧ್ಯಕ್ಷ ವಿದ್ಯಾಧರ ಜೈನ್, ಉದ್ಯಮಿ ಸಚಿನ್ ಎ.ಎಸ್., ದ.ಕ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಉಪಾಧ್ಯಕ್ಷ ವಿನಯ್ ಕುಮಾರ್, ಎಂಜಿನಿಯರ್ ಸುಧಾಕರ ಶೆಟ್ಟಿ ಕೋಟೆ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸೇವಾ ಟ್ರಸ್ಟ್‌ನ ಸ್ಥಾಪಕ ಸದಸ್ಯ ಎಚ್. ವಾಸುದೇವ ಪ್ರಭು, ಟೀಮ್ ಅಘೋರದ ಅಧ್ಯಕ್ಷ ಸಂತೋಷ್ ಶೆಟ್ಟಿ, ರಾಮನಗರದ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ರಘುರಾಮ ರಾಮನಗರ, ಉದ್ಯಮಿ ಸುಜೀರ್ ಗಣಪತಿ ನಾಯಕ್, ಸಮಿತಿಯ ಅಶೋಕ್ ರೈ ಅರ್ಪಿಣಿಗುತ್ತು, ಎನ್. ಗೋಪಾಲ ಹೆಗ್ಡೆ, ಕೀರ್ತನ್ ಶೆಟ್ಟಿ, ಜಗದೀಶ್ ಶೆಟ್ಟಿ, ಕಂಗ್ವೆ ವಿಶ್ವನಾಥ ಶೆಟ್ಟಿ, ಚಂದ್ರಹಾಸ ಹೆಗ್ಡೆ, ಯತೀಶ್ ಶೆಟ್ಟಿ, ಅನುರಾಧ ಆರ್. ಶೆಟ್ಟಿ, ಕರುಣಾಕರ ಸುವರ್ಣ, ರವೀಶ್ ಎಚ್.ಟಿ., ಪುರುಷೋತ್ತಮ ಮುಂಗ್ಲಿಮನೆ ಮತ್ತಿತರರು ಉಪಸ್ಥಿತರಿದ್ದರು.
ಸಮಿತಿಯ ಅಧ್ಯಕ್ಷ ಸುಧಾಕರ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here