ಸೆ.17 : ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ‘ಸಾಂಸ್ಕೃತಿಕ ಕಾರ್ಯಕ್ರಮ’

0

ಸಿಂಹಮಾಸದ ವಿಶೇಷ ಪೂಜೆಯ ಪ್ರಯುಕ್ತ ನೃತ್ಯೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು : ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆಯಲಿರುವ ಸಿಂಹಮಾಸದ ವಿಶೇಷ ಪೂಜೆಯ ಪ್ರಯುಕ್ತ ‘ವೈಷ್ಣವೀ ರಜತ ನೃತ್ಯಾಂತರ್ಯಾನದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ’ವನ್ನು ಸೆಪ್ಟೆಂಬರ್ 17ರಂದು ಸಂಜೆ 4.45ಕ್ಕೆ ಆಯೋಜಿಸಲಾಗಿದೆ.

ಕಾರ್ಯಕ್ರಮದ ದೀಪ ಪ್ರಜ್ವಲನೆ ಕಾರ್ಯಕ್ರಮವನ್ನು ಮುಳಿಯ ಸಮೂಹ ಸಂಸ್ಥೆಗಳ ಚೇರ್ಮನ್, ಗೌರವಾಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ನೆರವೇರಿಸಲಿದ್ದಾರೆ, ಅಧ್ಯಕ್ಷತೆಯನ್ನು ಶ್ರೀ ಭಗವತಿ ದೇವಸ್ಥಾನ ವ್ಯವಸ್ಥಾಪಕ ಕೇಶವ ಆರ್.ವಿ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಉದ್ಯಮಿ ಸುಭಾಷ್ ಚಂದ್ರ ನಾಯಕ್ ವಿಟ್ಲ ಹಾಗೂ ವಿದುಷಿ ಪಾರ್ವತಿ ಗಣೇಶ ಭಟ್ ಹೊಸಮೂಲೆ (ಗಾನಗಂಧರ್ವ ಸಂಗೀತ ಶಾಲೆ) ಸೇರಿದಂತೆ ಗಣ್ಯರು ಉಪಸ್ಥಿತರಿದ್ದು, ವಿವಿಧ ಸಾಂಸ್ಕೃತಿಕ ಹಾಗೂ ನೃತ್ಯ ಪ್ರದರ್ಶನಗಳು ನಡೆಯಲಿವೆ.

ಕಾರ್ಯಕ್ರಮದ ಅಂಗವಾಗಿ ಸಂಜೆ 6 ಗಂಟೆಯಿಂದ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ. ಇದರೊಂದಿಗೆ ನಟುವಾಂಗ, ಹಾಡುಗಾರಿಕೆ, ಮೃದಂಗ ಹಾಗೂ ಕೊಳಲು ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಸಂಗೀತ–ನೃತ್ಯ ಪ್ರದರ್ಶನಗಳು ಪ್ರೇಕ್ಷಕರ ಮನಸೂರೆಗೊಳ್ಳಲಿವೆ.

ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಕಲಾವಿದರು ಹಾಗೂ ನೃತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here