







ಪುತ್ತೂರು: ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ತೆರಳುವ ಮಾರ್ಗದಲ್ಲಿ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸುಳ್ಯಕ್ಕೆ ಭೇಟಿ ನೀಡಿದರು.


ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಕೆ.ಎಂ.ಮುಸ್ತಫ ಅವರು ಸಚಿವರನ್ನು ಸ್ವಾಗತಿಸಿ ಕೆಲವು ಸಮಸ್ಯೆಗಳನ್ನು ಗಮನಕ್ಕೆ ತಂದರು. ನಾಳೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಿಗದಿಯಾಗಿದ್ದು, ಈ ಬಗ್ಗೆ ಗಮನ ಹರಿಸುವುದಾಗಿ ಸಚಿವರು ತಿಳಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಾಲಿಬಾಲ್ ಅಸೋಸಿಯೇಷನ್ ಉಪಾಧ್ಯಕ್ಷ ಕೆ.ಬಿ.ಇಬ್ರಾಹಿಂ, ಸುಳ್ಯ ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಶಹೀದ್ ಪಾರೆ, ಸಚಿವರ ಆಪ್ತ ಸಹಾಯಕ ಶಿವಸ್ವಾಮಿ ಉಪಸ್ಥಿತರಿದ್ದರು.













