







ಪುತ್ತೂರು: ಮುಕ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲದ ಆಶ್ರಯದಲ್ಲಿ ನಿರ್ಮಿಸಲಾಗಿರುವ ‘ನೇಸರ ಪೌಷ್ಟಿಕ ಕೈತೋಟ’ಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲಾ ಆವರಣದಲ್ಲಿ ಪೌಷ್ಟಿಕ ಬೆಳೆಗಳನ್ನು ಬೆಳೆಸುವ ಮೂಲಕ ಮಕ್ಕಳಿಗೆ ಕೃಷಿ, ಸಾವಯವ ಪದ್ಧತಿ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಪ್ರಾಯೋಗಿಕ ಅರಿವು ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು.



ಈ ಸಂದರ್ಭದಲ್ಲಿ ನೇಸರ ದಶಪ್ರಣತಿ ಸಮಿತಿ ಸಂಚಾಲಕ ಕುಂಬ್ರ ದಯಾಕರ ಆಳ್ವ, ನೇಸರ ಯುವಕ ಮಂಡಲದ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು ಶಾಲಾ ಎಸ್ಡಿಎಂಸಿ ಅಧ್ಯಕ್ಷ ರಘುನಾಥ ಶೆಟ್ಟಿ ಬರಮೇಲು, ನೇಸರ ಯುವಕ ಮಂಡಲದ ಅಧ್ಯಕ್ಷ ರಕ್ಷಿತ್ ಗೌಡ ಮೊದಲಾದವರು ಉಪಸ್ಥಿತರಿದ್ದರು.













