ರೋಟರಿ ಕ್ಲಬ್ ಉಪ್ಪಿನಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ, ಇಂಜಿನಿಯರ್ಸ್ ಡೇ ಆಚರಣೆ

0

ಪುತ್ತೂರು: ರೋಟರಿ ಜಿಲ್ಲೆ 3181, ವಲಯ ನಾಲ್ಕರ ರೋಟರಿ ಕ್ಲಬ್ ಉಪ್ಪಿನಂಗಡಿ ವತಿಯಿಂದ ಸೆ.16 ರಂದು ಉಪ್ಪಿನಂಗಡಿ ರೋಟರಿ ಸಮುದಾಯ ಭವನದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್ ಡೇ ಆಚರಣೆ ನೆರವೇರಿತು.

ಮುಖ್ಯ ಅತಿಥಿಗಳಾಗಿ ರೋಟರಿ ಅಸಿಸ್ಟೆಂಟ್ ಗವರ್ನರ್ ಪ್ರೊ|ಝೇವಿಯರ್ ಡಿ’ಸೋಜ, ವಲಯ ಸೇನಾನಿ ಅನುರಾಧಾ ಶೆಟ್ಟಿ, ನಿಕಟಪೂರ್ವ ಅಸಿಸ್ಟೆಂಟ್ ಗವರ್ನರ್ ಡಾ.ರಾಜಾರಾಮ್ ಬಿ.ಕೆ, ಕ್ಲಬ್ ಅಧ್ಯಕ್ಷ ಕೇಶವ ಪಿ.ಎಂ, ನಿಕಟಪೂರ್ವ ಅಧ್ಯಕ್ಷ ಜೋನ್ ಕೆನ್ಯೂಟ್ ಮಸ್ಕರೇನ್ಹಸ್, ಕಾರ್ಯದರ್ಶಿ ರಾಜೇಶ್ ದಿಂಡಿಗಲ್, ಪೂರ್ವಾಧ್ಯಕ್ಷ ಅಝೀಜ್ ಬಸ್ತಿಕ್ಕಾರ್ ಸಹಿತ ಹಲವರು ಉಪಸ್ಥಿತರಿದ್ದರು.

ಸನ್ಮಾನ: ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಪುರಸ್ಕೃತ ಶಿಕ್ಷಕ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಇಬ್ರಾಹಿಂ ಕೆ, ನಿವೃತ್ತ ಶಿಕ್ಷಕಿ ವಂದನಾ ಮುದಲಾಜೆ, ಸಂಧ್ಯಾರಾಣಿ ಕೆ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೃಷ್ಣಪ್ಪ ಪೂಜಾರಿರವರುಗಳನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here