ಹೋಟೆಲ್ ಅಡುಗೆ ಕೆಲಸದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

0

ಪುತ್ತೂರು: ಪುತ್ತೂರಿನ ಹೋಟೆಲ್‌ವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ಸೆ.16ರಂದು ನಡೆದಿದೆ.


ಚಿಕ್ಕಮಗಳೂರು ಜಿಲ್ಲೆಯ ಜಯಪುರ ಗ್ರಾಮದ ಚಾಡಿಕಟ್ಟೆ ಶಾರದಾ ಎಂಬವರ ಪುತ್ರ ಅವಿವಾಹಿತ ಪ್ರಕಾಶ(52ವ)ರವರು ಹೃದಯಾಘಾತಕ್ಕೀಡಾಗಿ ಮೃತಪಟ್ಟವರು. ಅವರು ಪುತ್ತೂರು ಲೋಕೋಪಯೋಗಿ ಇಲಾಖೆಯ ಬಳಿಯ ವಿಧ್ಯಾದರ ಕಾಮತ್ ಅವರ ಮಾಲಕತ್ವದ ಓಂ ಪ್ರಕಾಶ್ ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಸೆ.16ರಂದು ಪ್ರಕಾಶ್ ಅವರು ಮಲಗುವ ಕೋಣೆಯಲ್ಲಿ ಬೆವರಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು 108 ಆ್ಯಂಬುಲೆನ್ಸ್ ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದ ವೇಳೆ ಅವರು ಹೃದಯಘಾತಕ್ಕೀಡಾಗಿ ಮೃತಪಟ್ಟಿರುವುದಾಗಿದೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಮೃತ ಪ್ರಕಾಶ್ ಅವರ ತಾಯಿ ಶಾರದಾ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here