







ಕಡಬ: ದ.ಕ., ಉಡುಪಿ, ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಕರ್ನಾಟಕ ಸಾವಯವ ಕೃಷಿ ಯೋಜನೆ ಮಂಗಳೂರು ವಿಭಾಗ ವತಿಯಿಂದ ನೀಡಲಾಗುತ್ತಿರುವ 2026-27ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಸಾವಯವ ಕೃಷಿಕ ಪ್ರಶಸ್ತಿಗೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೃಷ್ಣಪ್ಪ ಗೌಡ ಆಯ್ಕೆಯಾಗಿದ್ದಾರೆ.


ಇವರನ್ನು ಕರ್ನಾಟಕ ಸಾವಯವ ಕೃಷಿ ಯೋಜನೆಯ ಕಡಬ ತಾಲೂಕು ವಿಭಾಗದಿಂದ ಆಯ್ಕೆ ಮಾಡಲಾಗಿದ್ದು ಸೆ.21ರಂದು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ನಡೆಯುವ ಜಿಲ್ಲಾಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಕಾರ್ಯಕ್ರಮದಲ್ಲಿ ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ದುರ್ಗಾಂಬಾ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕರಾದ ಅಶೋಕ್‌ಕುಮಾರ್ ರೈ, ರಾಜೇಶ್ ನಾೖಕ್, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಪೂಜಾರಿ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಪಿ.ವಿ.ಮೋಹನ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ 160 ಕೃಷಿಕರಿಗೆ ಸನ್ಮಾನ, ಪ್ರಶಸ್ತಿ ಪ್ರಧಾನ ನಡೆಯಲಿದೆ ಎಂದು ಕರ್ನಾಟಕ ಸಾವಯವ ಕೃಷಿ ಯೋಜನೆಯ ಆಡಳಿತ ನಿರ್ದೇಶಕ ಮೋಹನ್‌ಕುಮಾರ್ ತಿಳಿಸಿದ್ದಾರೆ.













